ಕಲಬುರಗಿಜಿಲ್ಲಾಸುದ್ದಿ

ಎಸ್‌ಎಸ್‌ಎಲ್‌ಸಿಯಲ್ಲಿ 84.64%: ಗೌರ (ಬಿ) ಗ್ರಾಮದ ವೇದಾಂತಗೆ ಗಮನಾರ್ಹ ಸಾಧನೆ

ಕಲಬುರಗಿ: ಅಫಜಲಪುರ ತಾಲೂಕಿನ ಗೌರ (ಬಿ) ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿ ವೇದಾಂತ ಶಿವಶರಣಪ್ಪ ಗೌರ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 84.64% ಅಂಕಗಳನ್ನು ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಕಲಬುರಗಿಯ ಸೇಂಟ್ ಮೆರಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ಪರಿಶ್ರಮ, ನಿಯಮಿತ ಅಭ್ಯಾಸ ಹಾಗೂ ಶಿಕ್ಷಕರ ಮಾರ್ಗದರ್ಶನದ ಫಲವಾಗಿ ಈ ಯಶಸ್ಸು ಸಾಧಿಸಿದ್ದಾರೆ. ಅವರ ಸಾಧನೆಗೆ ಪೋಷಕರು, ಶಿಕ್ಷಕರು ಹಾಗೂ ಸ್ನೇಹಿತರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಮುಂದಿನ ದಿನಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡುವ ಉದ್ದೇಶವನ್ನು ವೇದಾಂತ ವ್ಯಕ್ತಪಡಿಸಿದ್ದು, ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button