ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಕಾತಿಗೆಡಾ.ಪರಶುರಾಮ ಸಿ ಎಂ. ಮನವಿ

ಕೆಂಭಾವಿ : ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಕಾತಿ ಕುರಿತು ಕರ್ನಾಟಕ ಸರ್ಕಾರ ಇತ್ತೀಚೆಗೆ ಭರವಸೆ ನೀಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ರಂಗಭೂಮಿ ಶಿಕ್ಷಣವನ್ನು ಬಲಪಡಿಸಲು ಅವಶ್ಯಕವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರುವರಿ 2026ರಲ್ಲಿ ಹೊನ್ನಾರು ರಂಗೋತ್ಸವದಲ್ಲಿ ರಂಗ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸುತ್ತದೆ ಎಂದು ಹೇಳಿದರು.
ಆದ್ದರಿಂದ ಮಕ್ಕಳ ಸಮಗ್ರ ವಿಕಾಸ, ವ್ಯಕ್ತಿತ್ವ ನಿರ್ಮಾಣಮತ್ತು ಮಾನಸಿಕ ಆರೋಗ್ಯ ವನ್ನು ಬಲಪಡಿಸುವ ದೃಷ್ಟಿಯಿಂದ ಶಾಲೆಗಳಲ್ಲಿ ರಂಗಶಿಕ್ಷಕರ ನೇಮಕಾತಿ ಮಾಡುವಂತೆ ಮನವಿ ಮಾಡಿದ್ದಾರೆ .ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು ಪಠ್ಯಾಭ್ಯಾಸದ ಜೊತೆಗೆ ರಂಗಕಲೆಯು ಮಕ್ಕಳಲ್ಲಿ ಆತ್ಮ ವಿಶ್ವಾಸ, ಅಭಿವ್ಯಕ್ತಿ ಸಾಮರ್ಥ್ಯ, ಭಾವನೆ ಹಾಗೂ ಒತ್ತಡ ನಿವಾರಣೆಗೆ ಮಹತ್ವದ ಪಾತ್ರವಹಿಸುತ್ತದೆ ಎಂದರು.
ಶಿಕ್ಷಣದಲ್ಲಿಯ ರಂಗಭೂಮಿಯನ್ನು ಅಳವಡಿಸುವುದು. ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯವಾಗಿರತ್ತದೆ. ಶಿಕ್ಷಣ ಸಾಹಿತ್ಯ, ಚಿತ್ರಕಲೆ, ಸಂಗೀತ, ನೃತ್ಯ ಒಳಗೊಂಡ ಒಂದು ಸಂಯೋಜಿತ ಕಲಾ ಮಾಧ್ಯಮವಾಗಿದೆ. ಶಾಲೆಗಳಲ್ಲಿ ರಂಗ ಶಿಕ್ಷಣ ಅಳವಡಿಕೆಯಿಂದ ಮಕ್ಕಳಲ್ಲಿ ಆತ್ಮ ವಿಶ್ವಾಸ ಹೆಚ್ಚಾಗಿ, ಮಕ್ಕಳ ಕಲಿಕೆಯ ಪ್ರಗತಿಯತ್ತ ಸಾಗುತ್ತದೆ.
ಇತ್ತೀಚೆಗೆ ಮಕ್ಕಳಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ, ಆತಂಕ ಮತ್ತು ಸಾಮಾಜಿಕ ಕೌಶಲ್ಯಗಳ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಶಾಲಾ ಮಟ್ಟದಲ್ಲಿ ಸೃಜನಾತ್ಮಕ ಚಟುವಟಿಕೆಗಳನ್ನು ವ್ಯವಸ್ಥಿತಗೊಳಿಸುವುದು ಅವಶ್ಯಕತೆ. ಇದೆ . ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಶಾಲೆಗಳಲ್ಲಿ ರಂಗ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಮನವಿ ಮಾಡಿದ್ದಾರೆ.



