ಕಲಬುರಗಿಜಿಲ್ಲಾಸುದ್ದಿ

ತಿಪ್ಪಣ್ಣಪ್ಪ ಕಮಕನೂರಿಗೆ MLC ಸ್ಥಾನ ಕೊಡಿ! | ಸಾಬ್ಬಣ್ಣ ಭರಾಟೆ ಒತ್ತಾಯ

ಕಲಬುರಗಿ: ಕೋಲಿ,ಕಬ್ಬಲಿಗ ಹಿಂದುಳಿದ ಸಮಾಜದ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ತಿಪ್ಪಣ್ಣಪ್ಪ ಕಮಕನೂರ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಪೂರ್ಣಾವಧಿಗೆ ಮುಂದುವರಿಸ ಬೇಕು ಎಂದು ಕಾಂಗ್ರೆಸ್ ಮುಖಂಡ ಸಾಬ್ಬಣ್ಣ ಭರಾಟೆ ದಂಡೋತಿ ಅವರು ಕಾಂಗ್ರೆಸ್ ನಾಯಕರಿಗೆ ಒತ್ತಾಯಿಸಿದರು.

ತಿಪ್ಪಣ್ಣಪ್ಪ ಕಮಕನೂರ ಅವರು 2019ರಲ್ಲಿ ಒಂದು ವರ್ಷದ ಅವಧಿಗೆ ಹಾಗೂ 2023ರಲ್ಲಿ ಮೂರು ವರ್ಷದ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಅವರ ಪ್ರಸ್ತುತ ಅವಧಿ ಇದೇ ಜೂನ್ 30ರಂದು ಅಂತ್ಯಗೊಳ್ಳಲಿದೆ. ಅವರಿಗೆ ಪೂರ್ಣಾವಧಿ ಅವಕಾಶ ದೊರಕದಿರುವುದು ವಿಷಾದನೀಯ ಸಂಗತಿ ಎಂದು ಅಭಿಪ್ರಾಯಪಟ್ಟಿದೆ.

ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಅಭಿವೃದ್ಧಿಗಾಗಿ ಕಮಕನೂರ ಅವರು ನಿರಂತರ ಹೋರಾಟ ನಡೆಸಿದ್ದು, ಸದನದಲ್ಲಿಯೂ ಜನಪರ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದ್ದಾರೆ ಎಂದು ಹೇಳಿದರು.

ಪಕ್ಷದ ಸಂಘಟನಾ ಬಲವರ್ಧನೆ ಹಾಗೂ ಹಿಂದುಳಿದ ವರ್ಗಗಳ ಮತಗಳನ್ನು ಪಕ್ಷದತ್ತ ಸೆಳೆಯುವಲ್ಲಿ ಅವರು ಮಹತ್ವದ ಪಾತ್ರವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ತಿಪ್ಪಣ್ಣಪ್ಪ ಕಮಕನೂರ ಅವರನ್ನು ಪೂರ್ಣಾವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಸಬೇಕು ಎಂದು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದರು.

Show More

Related Articles

Leave a Reply

Your email address will not be published. Required fields are marked *

Back to top button