ಅಸಂಘಟಿತ ವಲಯದ ಹಡಪದ ಅಪ್ಪಣ್ಣ ಕ್ಷೌರಿಕರಿಗೆ ಲೇಬರ್ ಸ್ಮಾರ್ಟ್ ಕಾಡ್೯ ವಿತರಣೆ
ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ ಈರಣ್ಣ ಸಿ ಹಡಪದ ಸಣ್ಣೂರ

ಕಲಬುರಗಿ – ಶಹಾಬಾದ್ನಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ
ಶಹಾಬಾದ್ ತಾಲ್ಲೂಕಿನ ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅಸಂಘಟಿತ ವಲಯದ ಕಾರ್ಮಿಕರು ರಾಜ್ಯದ ಮಹಾ ಆಸ್ತಿಯೆಂದು ಶ್ರೀ ಭಾಲ ಬ್ರಹ್ಮಚಾರಿ ರಾಜ ಶಿವಯೋಗಿ ಸ್ವಾಮೀಜಿ ಹೇಳಿದರು. ಹಡಪದ ಸಮುದಾಯ ಸದಾ ಸಮಾಜದ ಶುಭ ಹಾರೈಸುವ, ಒಗ್ಗಟ್ಟಿನಿಂದ ಹೋರಾಡುವ ಸಮುದಾಯ ಎಂದು ಅವರು ಹೇಳಿದರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಹಡಪದ ಅಪ್ಪಣ್ಣ ಸಮಾಜದ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ, ವಿಶೇಷವಾಗಿ ಕ್ಷೌರಿಕ ಬಂಧುಗಳಿಗೆ ಲೇಬರ್ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಲಾಯಿತು.
ರಾಜ್ಯದೆಲ್ಲೆಡೆ 85% ಜನರು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗಾಗಿ ಸರ್ಕಾರ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ ಯನ್ನು ಜಾರಿಗೊಳಿಸಿದ್ದು, 101 ವರ್ಗದ ಕಾರ್ಮಿಕರು, ಸುಮಾರು 35 ಲಕ್ಷ ಮಂದಿಯನ್ನು ಒಳಗೊಂಡಿದೆ. ಇ–ಶ್ರಮ್ ಪೋರ್ಟಲ್ ಮೂಲಕ ನೋಂದಾಯಿತ ಕಾರ್ಮಿಕರಿಗೆ 12 ಅಂಕಿಯ ಯುನಿವರ್ಸಲ್ ಅಕೌಂಟ್ ನಂಬರ್ ಹೊಂದಿರುವ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದರ ಮೂಲಕ ಅಪಘಾತ ವಿಮೆ, ಆರೋಗ್ಯ ವಿಮೆ, ಶಿಕ್ಷಣ, ಪಿಂಚಣಿ ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳ ಲಾಭ ಸಿಗಲಿದೆ ಎಂದು ಜಿಲ್ಲಾಧ್ಯಕ್ಷರು ತಿಳಿಸಿದರು.
ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಅವರು ಸಮಾಜದ ಅಭಿವೃದ್ಧಿಗೆ ಸಂಘಟನೆ ಅತ್ಯಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಸಂಘಟನಾ ಕಾರ್ಯದರ್ಶಿ ಬಸವರಾಜ ಹಳ್ಳಿ, ಜಿಲ್ಲೆಯ ಮುಖಂಡರಾದ ನಾಗಣ್ಣ ಮುತ್ತಕೋಡ, ಭಾಗಣ್ಣ ಹಡಪದ, ನೀಲಕಂಠ, ಸಿದ್ರಾಮ ಯಾಗಾಪೂರ ಸೇರಿದಂತೆ ಅನೇಕರು ಭಾಗವಹಿಸಿದರು.



