ಕಲಬುರಗಿಜಿಲ್ಲಾಸುದ್ದಿ

ನೀಟ್ ಪೇಪರ್ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ: ನೀಟ್ ಪರೀಕ್ಷೆಯ ಪೇಪರ್ ಸೋರಿಕೆ ಪ್ರಕರಣವನ್ನು ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧ್ಯಕ್ಷ ಶಕೀಲ ಅಹ್ಮದ್ ಸರಡಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಟಯರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀನಿವಾಸ್ ರಾಥೋಡ್ ಮಾತನಾಡಿ, ನೀಟ್ ಪೇಪರ್ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದ್ದು, ಪರೀಕ್ಷಾ ವ್ಯವಸ್ಥೆಯ ವೈಫಲ್ಯದಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಕೀಲ ಅಹ್ಮದ್ ಸರಡಗಿ ಮಾತನಾಡಿ, ದೇಶದ ಯುವಕರ ಕನಸುಗಳಿಗೆ ಧಕ್ಕೆ ತರುವ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ವಿದ್ಯಾರ್ಥಿಗಳ ಶ್ರಮಕ್ಕೆ ನ್ಯಾಯ ದೊರಕಬೇಕು ಹಾಗೂ ಪರೀಕ್ಷಾ ಅವ್ಯವಸ್ಥೆ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಿವಾನಂದ್ ಹೊನಗುಂಟಿ, ಈರಣ್ಣ ಪಾಟೀಲ್ ಜಳಕಿ, ಕಾರ್ತಿಕ್ ನಾಟೇಕರ್, ಫಾರೂಕ್ ಪಟೇಲ್ ಮುದುಬಾಳ, ವಿಘ್ನೇಶ್ವರ ಟೈಗರ್, ಪರಶುರಾಮ್ ನಾಟೀಕರ್, ಅಣವೀರಯ್ಯ ಮಠಪತಿ, ಚಂದ್ರು ಹಡಪದ್, ರಾಜು ಮಾಳಗಿ, ಪ್ರದೀಪ್ ದೊಣ್ಣೂರ್, ಅಸ್ಲಾಂ ಸಿಂದಗಿ, ಆಜ್ಹಾರ್ ಬಾದಾಲ್, ಎಸ್.ಕೆ. ಶೋಯಬ್, ಪ್ರಜ್ಞಾನಂದ ಸಂಗೊಳ್ಳಿ, ಅಸಿಮ್ ಪಟೇಲ್, ಆಮೆರ್ ಮರ್ಚಂಟ್, ಖುರಂ ಕಲ್ಯಾಣಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button