ಕಲಬುರಗಿರಾಜ್ಯ

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ | ಸಚಿವ ಸಂಪುಟದಲ್ಲಿ ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್!

ದೇವೇಗೌಡ, ಬಿಎಸ್‌ವೈ, ಸಿದ್ದುಗೆ ಆಹ್ವಾನ:ಪ್ರತಿಜ್ಞಾವಿಧಿ ಸಮಾರಂಭಕ್ಕ್ಕೂ ಮುನ್ನ ಇಂದು ಬೆಳಗ್ಗೆಯೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ, ಅವರ ಆಶೀರ್ವಾದ ಪಡೆದರು.

ಬೆಂಗಳೂರು: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಮೂಲಕ ಕರುನಾಡಿನಲ್ಲಿ ಹೊಸ ರಾಜಕೀಯ ಅಧ್ಯಾಯ ಆರಂಭವಾಗಲಿದೆ.

ಲೋಕಭವನದಲ್ಲಿ ಸಂಜೆ 4.05 ಗಂಟೆಗೆ ತುಲಾ ಲಗ್ನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.

ನೂತನ ಸರ್ಕಾರದಲ್ಲಿ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರೆತಿದ್ದು, ಅವರು ಸಹ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೊದಲ ಹಂತದ ಸಚಿವ ಸಂಪುಟದಲ್ಲಿ ಹಿರಿಯ ನಾಯಕರುಗಳಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಯು.ಟಿ. ಖಾದರ್, ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಡಾ. ಶರಣ ಪ್ರಕಾಶ್ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ ಹಾಗೂ ಬೈರತಿ ಸುರೇಶ್ ಸೇರಿದಂತೆ ಒಟ್ಟು 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದೇ ಮೊದಲ ಬಾರಿಗೆ ಲೋಕಭವನದಲ್ಲಿ ಪೂರ್ವಾಭಿಮುಖವಾಗಿ ನಿರ್ಮಿಸಲಾದ ವಿಶೇಷ ವೇದಿಕೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಕಾಂಗ್ರೆಸ್ ಸರ್ಕಾರದ ಹೊಸ ಆಡಳಿತ ಪರ್ವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ವಿವಿಧ ರಾಜ್ಯಗಳ ನಾಯಕರು ಭಾಗವಹಿಸಲಿದ್ದಾರೆ.

ಇದಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ. ವೇಣುಗೋಪಾಲ್, ಹಿರಿಯ ನಾಯಕರು ಜಯರಾಮ್ ರಮೇಶ್, ಕಪಿಲ್ ಸಿಬಲ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು, ಶಾಸಕರು, ಸಂಸದರು ಮತ್ತು ಪಕ್ಷದ ಮುಖಂಡರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಹಾಗೂ ಕುಟುಂಬ ಸದಸ್ಯರು ಸಹ ಸಮಾರಂಭದಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button