ಕಲಬುರಗಿಜಿಲ್ಲಾಸುದ್ದಿ

ಆರ್ಥಿಕ ಬೆಳವಣಿಗೆಗೆ ಮೇಕ್ ಇನ್ ಇಂಡಿಯಾ ಪೂರಕ

ಕಲಬುರಗಿ: ಭಾರತದಲ್ಲಿ ವಿನ್ಯಾಸ, ತಯಾರಿಕೆ ಮತ್ತು ಜೋಡಣೆಯನ್ನು ಉತ್ತೇಜಿಸಿ ವ್ಯಾಪಾರ-ವ್ಯವಹಾರ ವೃದ್ಧಿಗೆ ಪೂರಕವಾಗಿರುವ ಮೇಕ್ ಇನ್ ಇಂಡಿಯಾ ಯೋಜನೆ ಆರ್ಥಿಕ ಬೆಳವಣಿಗೆಗೆ ಸಹಕಾರಿ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಮಾಲೀಕರ ಸಂಘದ ಅಧ್ಯಕ್ಷ ಭೀಮಾಶಂಕರ ಪಾಟೀಲ್ ಅಭಿಪ್ರಾಯಪಟ್ಟರು.

ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ನಡೆದ ಮೇಕ್ ಇನ್ ಇಂಡಿಯಾ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ. ಪಾಟೀಲ್ ಅವರು, ಉತ್ಪಾದನೆಯಲ್ಲಿ ಹೂಡಿಕೆ ಹೆಚ್ಚಿಸುವುದು, ನಾವೀನ್ಯತೆಯನ್ನು ಉತ್ತೇಜಿಸುವುದು, ವ್ಯಾಪಾರ ಮಾಡಲು ಸುಲಭವಾದ ವಾತಾವರಣ ನಿರ್ಮಾಣ, ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕೌಶಲ್ಯ ವೃದ್ಧಿ ಈ ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡರೆ ಭವಿಷ್ಯದಲ್ಲಿ ಜಾಗತಿಕ ಸ್ಪರ್ಧಾತ್ಮಕತೆಯಲ್ಲಿ ಭಾರತ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶಿವಲಿಂಗಪ್ಪ ತಳವಾರ, ಶಶಿಕುಮಾರ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button