ಜ.1ರಂದು ಭೀಮ ಕೋರೆಗಾಂವ್ ವಿಜಯೋತ್ಸವ – ಭವ್ಯ ಮೆರವಣಿಗೆ ಹಾಗೂ ಬಹಿರಂಗ ಸಭೆ

ಜೇವರ್ಗಿ : ಜೇವರ್ಗಿಯಲ್ಲಿ ಭೀಮ ಕೋರೆಗಾಂವ್ ವಿಜಯೋತ್ಸವವನ್ನು ಅತ್ಯಂತ ವಿಜ್ರಮಣೆಯಿಂದ ಆಚರಿಸಲಾಗುತ್ತಿದೆ ಎಂದು ಭೀಮಾ ಕೋರೆಗಾಂವ್ ವಿಜಯೋತ್ಸವ ತಾಲೂಕ ಸಮಿತಿ ಜೇವರ್ಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಜೇವರ್ಗಿ ಪಟ್ಟಣದಲ್ಲಿ ಜನವರಿ 1 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜ್ರಮಣೆಯಿಂದ ಆಚರಿಸಲಾಗುತ್ತಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಕೋರೆಗಾವ್ ವಿಜಯಸ್ತಂಬದ ಭವ್ಯ ಮೆರವಣಿಗೆ ಡಾ. ಬಿ ಆರ್ ಅಂಬೇಡ್ಕರ್ ಭವನದಿಂದ ಪ್ರಾರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಜೆ 4:00 ಗಂಟೆಯವರೆಗೆ ನಡೆಯಲಿದೆ. ಸಂಜೆ 4:30ಕ್ಕೆ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ಬಹಿರಂಗ ಸಭೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ತಾಲೂಕಿನ ರಾಜಕೀಯ ಮುಖಂಡರು, ಹೋರಾಟಗಾರರು, ಸಮಾಜದ ಹಿರಿಯರು, ಯುವಕರು ಸೇರಿದಂತೆ ಸಮಸ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ತಾಲೂಕಿನ ಜನರು ಭಾಗವಹಿಸಲಿದ್ದಾರೆ. ಆದಕಾರಣ ತಾಲೂಕಿನ ಸಮಸ್ತ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು 208ನೇ ಭೀಮಾ ಕೋರೆಗಾವ್ ವಿಜಯೋತ್ಸವ ತಾಲೂಕ ಸಮಿತಿ ಜೇವರ್ಗಿ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದರು.



