ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ : ಗುತ್ತೇದಾರ
ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್

ಎಲ್ಲಾ ಇಲಾಖೆಗೆ ಹಣವನ್ನು KKRDB ಇಂದಾನೆ ಕೊಡ್ತಾ ಇದಾರೆ ಬಜೆಟ್ ಮಂಡನೆ ಆಗಿದೆ ಅದನ್ನ ಇನ್ನೂ ತಿದ್ದು ಪಡಿ ಮಾಡಲು ಅವಕಾಶ ಇದೆ ಅದನ್ನ ಸರಿ ಪಡಿಸಬೇಕು ಖಾಲಿ ಹುದ್ದೆ ಭರ್ತಿ ಭರ್ತಿ ಮಾಡ್ತಾ ಇಲ್ಲ 3 ಲಕ್ಷದಷ್ಟು ಹುದ್ದೆಗಳು ಖಾಲಿ ಇವೆ ರಾಜ್ಯದಲ್ಲಿ ಆಡಳಿತ ಕುಸಿದಿದೆ ನೇಮಕಾತಿ ಮಾಡ್ಕೋತೀನಿ ಅಂತ ಹೇಳಿದ್ರಿ ಆದ್ರೆ ಇನ್ನೂ ಪ್ರಕ್ರಿಯೆ ಆರಂಭ ಆಗಿಲ್ಲ.- ಬಾಲರಾಜ್ ಗುತ್ತೇದಾರ,ಜೆಡಿಎಸ್ ಜಿಲ್ಲಾಧ್ಯಕ್ಷರು ಕಲಬುರಗಿ.
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ, ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕಳಪೆ ಬಜೆಟ್, ಅಭಿವೃದ್ದಿ ಶೂನ್ಯ ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್, 1.32 ಲಕ್ಷ ಕೋಟಿ ಸಾಲ ಮಾಡಿ ಸುಮಾರು 25 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿ 22 ಸಾವಿರ ಕೋಟಿ ರೂ. ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ. ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್. ಇದರಿಂದ ರಾಜ್ಯದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ. ರಾಜ್ಯವನ್ನು ಹತ್ತರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. ಇದರಿಂದ ನಿರಾಸೆಯಾಗಿದೆ 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿoದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.
ಉದಾಹರಣೆಗೆ ನೀರಾವರಿಗೆ ಕೇವಲ 22 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 25 ಸಾವಿರ ಕೋಟಿ ರೂ. ಮೀಸಲಿಡಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾ ಭಿವೃದ್ಧಿಗೆ ಅನುದಾನ ಕಡಿಮೆ ಇದೆ. ಇವರು ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.



