ವಿಠ್ಠಲ ಹೇರೂರ ಮೆಟ್ರಿಕ್ ನಂತರದ ಬಾಲಕರ ಉಚಿ ತ ವಸತಿ ನಿಲಯದಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

ಕಲಬುರಗಿ:ಭಾರತದ ಪ್ರಥಮ ಮಹಿಳಾ ಶಿಕ್ಷಕಿಯಾಗಿದ್ದ ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಯನ್ನು ಹಿರಪುರು ವೃತ್ತದ ಜಿ.ಡಿ.ಎ. ಬಡಾವಣೆ ಯಲ್ಲಿರುವ ಮಹರ್ಷಿ ವೇದವ್ಯಾಸ ಮಂಥನ ಮತ್ತು ಪ್ರೇರಣ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿ ಸುತ್ತಿರುವ ಸ್ವಾಭಿಮಾನಿ ಶ್ರೀ ವಿಠ್ಠಲ ಹೇರೂರ ಮೆಟ್ರಿಕ್ ನಂತರದ ಬಾಲಕರ ಉಚಿತ ವಸತಿ ನಿಲಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆ ಅವರ ಶಿಕ್ಷಣ ಕ್ಷೇತ್ರದ ಸಾಧನೆ, ಸಾಮಾಜಿಕ ಸಮಾನತೆ ಹಾಗೂ ಮಹಿಳಾ ಸಬಲೀಕರಣಕ್ಕೆ ನೀಡಿದ ಅಮೂಲ್ಯ ಕೊಡುಗೆಗಳ ಕುರಿತು ಉಪನ್ಯಾಸ, ಭಾಷಣ ಹಾಗೂ ವಿವಿಧ ಜಾಗೃತಿ ಚಟುವಟಿಕೆ ಗಳನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಮುಕ್ಕಾ ಮಾತನಾಡಿ, ಸಾವಿತ್ರಿಬಾಯಿ ಫುಲೆ ಅವರ ತಾಳ್ಮೆ, ಧೈರ್ಯ ಮತ್ತು ಕ್ರಾಂತಿಕಾರಿ ಚಿಂತನೆಗಳು ಇಂದಿನ ಪೀಳಿಗೆಗೆ ಆದರ್ಶವಾಗಿವೆ ಎಂದು ಹೇಳಿದರು. ಅವರ ಜೀವನ ಚರಿತ್ರೆಯನ್ನು ಮಾದರಿಯಾಗಿ ತೆಗೆದುಕೊಂಡು ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳ ಬೇಕೆಂದು ಕರೆ ನೀಡಿದರು.
ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಶಾಮ್ ಕುಮಾರ್ ಮಾತನಾಡಿ, ಜಯಂತಿ ಆಚರಣೆಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಓದು ಪರೀಕ್ಷೆಗೆ ಮಾತ್ರ ಸೀಮಿತವಾಗದೆ ಜ್ಞಾನ ಹಾಗೂ ಕೌಶಲ್ಯ ಗಳಿಕೆಗೆ ಇರಬೇಕು ಎಂದು ತಿಳಿಸಿದರು. ಬಡತನದಲ್ಲಿ ಹುಟ್ಟಿದರೂ ಜೀವನಪೂರ್ತಿ ಬಡತನದಲ್ಲೇ ಉಳಿಯಬಾರದು ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಟ್ರಸ್ಟ್‌ನ ಹಿರಿಯ ಸದಸ್ಯರಾದ ಪ್ರೊ. ಗಿರಿಮಲ್ಲಪ್ಪ ಹರವಾಳ ಮಾತನಾಡಿ, ಶಿಕ್ಷಕರ ವೃತ್ತಿ ಪವಿತ್ರವಾದದ್ದು ಎಂದು ಹೇಳಿ, ಶಿಕ್ಷಣದ ಮೂಲಕ ಹೆಣ್ಣು ಮಕ್ಕಳ ಆರ್ಥಿಕ ಭದ್ರತೆ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯವೆಂದು ಅಭಿಪ್ರಾಯಪಟ್ಟರು.
ಟ್ರಸ್ಟ್ ಸದಸ್ಯರಾದ ಶ್ರೀ ಸಿದ್ದರಾಜ್ ಕಿನ್ನೂರ ಮಾತನಾಡಿ, ಪ್ರಾಚೀನ ಹಾಗೂ ಆಧುನಿಕ ಯುಗಗಳಲ್ಲಿ ಮಹಿಳೆಯರ ಪಾತ್ರ ಮತ್ತು ಶಿಕ್ಷಣದ ಬೆಳವಣಿಗೆಯ ಕುರಿತು ವಿವರಿಸಿದ ರು.
ಇಂದಿನ ಯುಗದಲ್ಲಿ ವಿದ್ಯಾದೇವತೆ ಎಂದರೆ ಸಾವಿತ್ರಿಬಾಯಿ ಫುಲೆ ಎಂದೇ ಕರೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.



