ಕಲಬುರಗಿಜಿಲ್ಲಾಸುದ್ದಿ

ಜೇವರ್ಗಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಾಠಕ್ಕಿಂತ ಆಟವೇ ಹೆಚ್ಚು! – ಪಾಲಕರ ಆಕ್ರೋಶ

ಜೇವರ್ಗಿ: ಜೇವರ್ಗಿ ಪಟ್ಟಣದಲ್ಲಿರುವ ಮುರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ಬಾಲಕ – ಬಾಲಕಿಯರ ವಸತಿ ಶಾಲೆಯಲ್ಲಿ ಪಾಠ ಬೋಧನೆ ಸರಿಯಾಗಿ ನಡೆಯದೇ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಳಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮಾಹಿತಿ ಪ್ರಕಾರ, ಶಾಲೆಯ ಇಂಗ್ಲಿಷ್ ಶಿಕ್ಷಕರಾದ ರಮೇಶ್ ಬಿರಾದರ್ ದೃಷ್ಟಿ ದೋಷದಿಂದ ಬಳಲುತ್ತಿದ್ದು, ಸರಿಯಾಗಿ ಪಾಠ ಬೋಧನೆ ಮಾಡಲು ಅಸಮರ್ಥರಾಗಿದ್ದಾರೆ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ಶಿಕ್ಷಣ ಕುಂಟಿತಗೊಂಡಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಲಕರ ಪ್ರಕಾರ, ಈ ಕುರಿತಂತೆ ಅವರು ಹಲವಾರು ಬಾರಿ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಅಲ್ಲದೆ, ಶಾಲೆಯ ಪ್ರಾಂಶುಪಾಲರು ಸಹ ಶಿಕ್ಷಕರ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದು, ಶಾಲೆಯ ಶಿಸ್ತಿನ ವಾತಾವರಣ ಸಂಪೂರ್ಣ ಹಾಳಾಗಿದೆ ಎಂದು ಆರೋಪಿಸಲಾಗಿದೆ.

ಶಾಲೆಯಲ್ಲಿ ಬಡ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಭವಿಷ್ಯ ಹಾಳಾಗುವ ಭೀತಿ ವ್ಯಕ್ತವಾಗಿದೆ. ಈ ಬಗ್ಗೆ ಪಾಲಕರು ಜಿಲ್ಲಾಧಿಕಾರಿಗಳಿಗೆ ಪುನಃ ಮನವಿ ಸಲ್ಲಿಸಿ, ಅಸಮರ್ಥ ಶಿಕ್ಷಕರ ವಿರುದ್ಧ ಕ್ರಮ ಜರುಗಿಸಿ, ವಿದ್ಯಾರ್ಥಿಗಳಿಗೆ ಪರ್ಯಾಯ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಬೇಕೆಂದು ಆಗ್ರಹಿಸಿದ್ದಾರೆ.

“ಬಡ ಮಕ್ಕಳ ಭವಿಷ್ಯವನ್ನು ನಿರ್ಲಕ್ಷ್ಯದಿಂದ ಹಾಳು ಮಾಡುವವರ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು. ಈ ವರ್ಷ ಎಸ್‌ಎಸ್‌ಎಲ್‌ಸಿ ಓದುತ್ತಿರುವ ಮಕ್ಕಳಿಗೆ ಪರ್ಯಾಯ ಶಿಕ್ಷಕರನ್ನು ನೇಮಿಸಿ ಪಾಠ ಬೋಧನೆ ಮಾಡಬೇಕು,”
ಎಂದು ಪಾಲಕರ ಪರವಾಗಿ ಮಾತನಾಡಿದ ಮಹೆಬೂಬ್ ಕೆ. ಗಂವಾರ್ ಆಗ್ರಹಿಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button