ಸರ್ವಜ್ಞ–ಜಸ್ಟಿಸ್ ಶಿವರಾಜ ಪಾಟೀಲ ಪಿಯು ಕಾಲೇಜಿನಲ್ಲಿ ಲಿಂಗೈಕ್ಯ ಗಣ್ಯರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಕಲಬುರಗಿ: ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ 2025ನೇ ವರ್ಷದಲ್ಲಿ ಲಿಂಗೈಕ್ಯರಾದ ಗಣ್ಯ ವ್ಯಕ್ತಿಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ಸಂಸ್ಥಾನದ ಎಂಟನೇ ಪೀಠಾಧಿಪತಿ ಪರಮ ಪೂಜ್ಯ ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪ, ಅಖಿಲ ಭಾರತ ವೀರಶೈವ–ಲಿಂಗಾಯತ ಸಮಾಜದ ಅಧ್ಯಕ್ಷ ಲಿಂಗೈಕ್ಯ ಶಾಮನೂರು ಶಿವಶಂಕರಪ್ಪ, ಕಲಬುರಗಿ ವೀರಶೈವ ಸಮಾಜದ ಮಾಜಿ ಅಧ್ಯಕ್ಷ ಲಿಂಗೈಕ್ಯ ಬಸವರಡ್ಡಿ ಇಟಗಿ ಹಾಗೂ ವಿಶ್ರಾಂತ ಜಿಲ್ಲಾ ನ್ಯಾಯಾಧೀಶರು ಮತ್ತು ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನದ ಅಧ್ಯಕ್ಷ ಲಿಂಗೈಕ್ಯ ಎಸ್.ಎಂ. ರಡ್ಡಿ ಅವರ ಸಮಾಜಸೇವೆ, ಶೈಕ್ಷಣಿಕ ಹಾಗೂ ಮಾನವೀಯ ಕೊಡುಗೆಗಳನ್ನು ಸ್ಮರಿಸಿ ಸಂಸ್ಥೆಯ ವತಿಯಿಂದ ಗೌರವಪೂರ್ವಕ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದೇವರು ಲಿಂಗೈಕ್ಯರಾದ ಮಹಾನೀಯರ ಆತ್ಮಗಳಿಗೆ ಶಾಂತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಎಲ್ಲರೂ ಪ್ರಾರ್ಥಿಸಿದರು.
ಸಭೆಯಲ್ಲಿ ಸಂಸ್ಥೆಯ ಸಂಸ್ಥಾಪಕ ಪ್ರೊ. ಚನ್ನಾರಡ್ಡಿ ಪಾಟೀಲ, ಪ್ರಭುಗೌಡ ಸಿದ್ಧಾರೆಡ್ಡಿ, ಪ್ರಶಾಂತ ಕುಲಕರ್ಣಿ, ವಿನುತಾ ಆರ್.ಬಿ., ಅಭಿಷೇಕ್ ಪಾಟೀಲ, ಕರುಣೇಶ್ ಹಿರೇಮಠ, ಗುರುರಾಜ ಕುಲಕರ್ಣಿ ಸೇರಿದಂತೆ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಗೌರವ ಸಲ್ಲಿಸಿದರು.



