ಕಲಬುರಗಿಜಿಲ್ಲಾಸುದ್ದಿ

ಮದರ್ ತೆರೆಸಾ ಶಾಲೆಯಲ್ಲಿ ವಿಜ್ಞಾನ–ಕಲಾವಸ್ತು ಪ್ರದರ್ಶನ

ಕಲಬುರಗಿ: ನಗರದ ಗೋದುತಾಯಿ ನಗರದಲ್ಲಿರುವ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ಶಾಲಾ ಆವರಣದಲ್ಲಿ ವಿಜ್ಞಾನ ಹಾಗೂ ಕಲಾ ವಸ್ತು ಪ್ರದರ್ಶನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಪ್ರದರ್ಶನವು ಮಕ್ಕಳಲ್ಲಿರುವ ಸೃಜನಶೀಲತೆ, ವೈಜ್ಞಾನಿಕ ಮನೋಭಾವ, ಕೌಶಲ್ಯ ಹಾಗೂ ಸುಪ್ತ ಪ್ರತಿಭೆಯನ್ನು ಹೊರಹಾಕುವ ವೇದಿಕೆಯಾಗಿತು.

ಕಾರ್ಯಕ್ರಮಕ್ಕೆ ಸಂಸ್ಥೆಯ ಕಾರ್ಯದರ್ಶಿ ಶಿವಪುತ್ರಪ್ಪ ಡೆಂಕಿ ಅವರು ಉಪಸ್ಥಿತರಿದ್ದು ಮಾತನಾಡಿ, “ಇಂತಹ ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನಗಳು ‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬ ಗಾದೆಯಂತೆ ಮಕ್ಕಳಲ್ಲಿ ನೈಜತೆ, ಕ್ರಿಯಾತ್ಮಕ ಚಟುವಟಿಕೆ ಮತ್ತು ಅಡಗಿರುವ ಪ್ರತಿಭೆಯನ್ನು ಅರಳಿಸುತ್ತವೆ. ಜೊತೆಗೆ ವೀಕ್ಷಣಾ ಕೌಶಲ್ಯ ಹಾಗೂ ವೈಜ್ಞಾನಿಕ ಜಾಗೃತಿ ಬೆಳೆಯಲು ಸಹಕಾರಿಯಾಗುತ್ತವೆ. ಮಕ್ಕಳು ಇದನ್ನು ತಮ್ಮ ದೈನಂದಿನ ಜೀವನದಲ್ಲೂ ಅಳವಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ವಸ್ತು ಪ್ರದರ್ಶನದಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಇತಿಹಾಸ, ಭೌಗೋಳಿಕ ಹಾಗೂ ವಿವಿಧ ವೈಜ್ಞಾನಿಕ ಮಾದರಿಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ವೈಚಾರಿಕತೆ ಮತ್ತು ನವೀನ ಚಿಂತನೆಗೆ ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರದರ್ಶನ ವೀಕ್ಷಿಸಲು ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರು ಸೇರಿ ಸಾವಿರಕ್ಕೂ ಅಧಿಕ ಮಂದಿ ಆಗಮಿಸಿ ಮಕ್ಕಳ ಪ್ರತಿಭೆಯನ್ನು ಕೊಂಡಾಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರು ನಾಗೇಂದ್ರ ಬಡಿಗೇರ್, ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related Articles

Leave a Reply

Your email address will not be published. Required fields are marked *

Back to top button