ಕಲಬುರಗಿಜಿಲ್ಲಾಸುದ್ದಿ

ಬೆಂಗಳೂರಿನಲ್ಲಿ ಮೇ 31ರಂದು ಕುಡುಒಕ್ಕಲಿಗರ ವಿಶೇಷ ಸಭೆ

ಕಲಬುರಗಿ:ರಾಜ್ಯ ಒಕ್ಕಲಿಗರ ಸಂಘ ವತಿಯಿಂದ ಮೇ 31ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ ಹಾಗೂ ಗಾಯತ್ರಿ ವೃಕ್ಷ ಆವರಣದಲ್ಲಿ ವಿಶೇಷ ಸರ್ವ ಸದಸ್ಯರ ಸಭೆ ಆಯೋಜಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕುಡುಒಕ್ಕಲಿಗ ಅಭಿವೃದ್ಧಿ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಾಗಣ್ಣಗೌಡ ಬಿ. ಪಾಟೀಲ ಶಂಕರವಾಡಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಲ್ಯಾಣ ಕರ್ನಾಟಕ ಹಾಗೂ ಸುವರ್ಣ ಕರ್ನಾಟಕ ವ್ಯಾಪ್ತಿಯ ವಿವಿಧ ಜಿಲ್ಲೆಗಳಲ್ಲಿರುವ ಕುಡುಒಕ್ಕಲಿಗ ಸಮುದಾಯದವರು ಈಗಾಗಲೇ ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವ ಪಡೆದಿದ್ದು, ಎಲ್ಲ ಸದಸ್ಯರು ಸಭೆಗೆ ತಪ್ಪದೇ ಆಗಮಿಸಬೇಕು ಎಂದು ಮನವಿ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಬೀದರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಹೊಸಪೇಟೆ ಸೇರಿದಂತೆ ಸುವರ್ಣ ಕರ್ನಾಟಕ ಭಾಗದ ಬೆಳಗಾವಿ, ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ, ಚಿಕ್ಕೋಡಿ ಹಾಗೂ ಮಧ್ಯ ಕರ್ನಾಟಕದ ದಾವಣಗೆರೆ, ಚಿತ್ರದುರ್ಗ ಮತ್ತು ಬೆಂಗಳೂರು ನಗರದಲ್ಲಿ ವಾಸಿಸುವ ಕುಡುಒಕ್ಕಲಿಗ ಸಮುದಾಯದ ಸದಸ್ಯರು ಸಭೆಯಲ್ಲಿ ಭಾಗವಹಿಸಿ ತಮ್ಮ ಪ್ರಾಂತಕ್ಕೆ ಸಂಬಂಧಿಸಿದ ಸಲಹೆ-ಸೂಚನೆಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ಸಮುದಾಯದ ಗಣ್ಯರು, ವಿದ್ಯಾರ್ಥಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕೋರಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button