ಕಲಬುರಗಿಜಿಲ್ಲಾಸುದ್ದಿ
ಮಹಾಶಕ್ತಿಪೀಠ ಶ್ರೀನಿವಾಸ್ ಸರಡಗಿಯಲ್ಲಿ 13ನೇ ದಸರಾ ದರ್ಬಾರ್ ವೈಭವ

ಕಲಬುರಗಿ: ತಾಲೂಕಿನ ಶ್ರೀನಿವಾಸ್ ಸರಡಗಿ ಗ್ರಾಮದ ಮಹಾಶಕ್ತಿ ಪೀಠದಲ್ಲಿ 13ನೇ ದಸರಾ ದರ್ಬಾರದ ಅಂಗವಾಗಿ ಭವ್ಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
2ನೇ ಮೈಸೂರು ಮಾದರಿಯಲ್ಲಿ ಆಯೋಜಿಸಿದ್ದ ಜಂಬೂ ಸವಾರಿ ಮೆರವಣಿಗೆ, ತುಲಾಭಾರ ಕಾರ್ಯಕ್ರಮ ಹಾಗೂ ಭಾವೈಕ್ಯ ಧರ್ಮಸಭೆಯನ್ನು ಗಣ್ಯರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಕ್ತಿಪೀಠಾಧಿಪತಿಗಳಾದ ಡಾ. ಅಪ್ಪಾರಾವ ದೇವಿ ಮುತ್ಯಾ, ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಸೇರಿದಂತೆ ವಿವಿಧ ಮಠಾಧೀಶರು, ರಾಜಕೀಯ ಮುಖಂಡರು, ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶದ ಭಕ್ತರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ನಂತರ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸಿದ ಗಣ್ಯ ವ್ಯಕ್ತಿಗಳಿಗೆ ಸುಕ್ಷೇತ್ರ ಶ್ರೀನಿವಾಸ ಸರಡಗಿ ಶ್ರೀ ಶಕ್ತಿಪೀಠದ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.