ಯಾದಗಿರಿ

ಲೇಖಕಿ ಪಾರ್ವತಿ ಎಸ್. ಬೂದುರುಗೆ ‘ಬುದ್ಧ, ಬಸವ, ಅಂಬೇಡ್ಕರ್ ರತ್ನ’ ಪ್ರಶಸ್ತಿ

ಕೆಂಭಾವಿ: ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಲೇಖಕಿ ಶ್ರೀಮತಿ ಪಾರ್ವತಿ ಎಸ್. ಬೂದುರು ಅವರಿಗೆ ಶಹಾಪುರದ ‘ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸ್ವಾಭಿಮಾನಿ ಬಳಗ’ದ ವತಿಯಿಂದ ಪ್ರತಿಷ್ಠಿತ “ಬುದ್ಧ, ಬಸವ, ಅಂಬೇಡ್ಕರ್ ರತ್ನ ಪ್ರಶಸ್ತಿ” ಘೋಷಿಸಲಾಗಿದೆ.

ಮೇ 31ರಂದು ಶಹಾಪುರದಲ್ಲಿ ಆಯೋಜಿಸಿರುವ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ವಿಭಾಗ ಮಟ್ಟದ ಕವಿಗೋಷ್ಠಿ ಹಾಗೂ “ಕೋಲ್ಕಿಂಚಿನ ಬೆಳಕು” ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಸಾಹಿತ್ಯ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಪಾರ್ವತಿ ಎಸ್. ಬೂದುರು ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಯ ಸಾಹಿತ್ಯಾಸಕ್ತರು, ಕವಿಗಳು, ಸಮಾಜಮುಖಿ ಚಿಂತಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button