ಕಲಬುರಗಿಜಿಲ್ಲಾಸುದ್ದಿ

ಸರಕಾರಿ ಮಹಿಳಾ ಕಾಲೇಜಿನಲ್ಲಿ ವಾರ್ಷಿಕೋತ್ಸವ | ವಿದ್ಯಾರ್ಥಿನಿಯರಿಗೆ ಭಾವನಾತ್ಮಕ ಬೀಳ್ಕೊಡುಗೆ

ಕಲಬುರಗಿ: ಕಾಲೇಜು ಶಿಕ್ಷಣ ಇಲಾಖೆ ಅಧೀನದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್, ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಬುದ್ಧ-ಬಸವ-ಅಂಬೇಡ್ಕರ್ ವೇದಿಕೆಯ ವಾರ್ಷಿಕೋತ್ಸವ ಮತ್ತು ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಶುಕ್ರವಾರ ಜೇವರ್ಗಿ ಕಾಲೋನಿಯ ಕಾಲೇಜು ಆವರಣದಲ್ಲಿ ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದ ಪ್ರಾಂಶುಪಾಲೆ ಡಾ. ಸವಿತಾ ತಿವಾರಿ ಅವರು, ವಿದ್ಯಾರ್ಥಿನಿಯರು ವಿದ್ಯಾಭ್ಯಾಸದೊಂದಿಗೆ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾಲೇಜು ಜೀವನವು ಭವಿಷ್ಯದ ಬಲವಾದ ಅಡಿಪಾಯವಾಗಿದ್ದು, ವಿದ್ಯಾರ್ಥಿನಿಯರು ಆತ್ಮವಿಶ್ವಾಸ ಮತ್ತು ದೃಢಸಂಕಲ್ಪದೊಂದಿಗೆ ತಮ್ಮ ಗುರಿ ಸಾಧನೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಮೋರಗೆ ಪ್ರಕಾಶ್ ವಹಿಸಿದ್ದರು. ವಿದ್ಯಾರ್ಥಿನಿಯರ ಸರ್ವಾಂಗೀಣ ಬೆಳವಣಿಗೆಗೆ ಕಾಲೇಜಿನ ಎಲ್ಲಾ ವಿಭಾಗಗಳ ಸಹಕಾರ ಮತ್ತು ಮಾರ್ಗದರ್ಶನ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸಿಡಿಸಿ ಸದಸ್ಯರಾದ ಕಿಶೋರಸಿಂಗ್, ಬಿ.ಎಸ್. ಬಿರಾದಾರ, ಹುಲಿಕಂಠರಾಯ ಗೌಡ, ರಾಘು ಮೈಲಾಪೂರ, ಲಾಲ್ ಅಹ್ಮದ್ ಬಾಂಬೆ ಸೇಠ್, ವಾಣಿ ಸಾಗರಕರ್, ಧರ್ಮರಾಜ ಹೇರೂರ, ವಿದ್ಯಾ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದಲ್ಲದೆ ಡಾ. ಜ್ಯೋತಿ ಕೆ.ಎಸ್., ಡಾ. ಪದ್ಮಣ್ಣಾ ರಾಸಣಗಿ, ಡಾ. ರೂಪಾಲಿ ರಾಠೋಡ, ಡಾ. ಜ್ಯೋತಿ ರೆಡ್ಡಿ, ಡಾ. ಪದ್ಮಾವತಿ ಧನ್ನಿ, ಡಾ. ಸಂತೋಷ್ ಹುಂಪಳಿ, ಡಾ. ಮೀನಾಕ್ಷಿ ವಿಜಯಕುಮಾರ, ಡಾ. ಶರಣಬಸಪ್ಪ ಚಿಕ್ಕಳ್ಳಿ ಹಾಗೂ ಡಾ. ವಿನೋದಕುಮಾರ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

Show More

Related Articles

Leave a Reply

Your email address will not be published. Required fields are marked *

Back to top button