ಕಲಬುರಗಿಜಿಲ್ಲಾಸುದ್ದಿ

ಬಕ್ರೀದ್ ಹಬ್ಬ ಶಾಂತಿ-ಸೌಹಾರ್ದದಿಂದ ಆಚರಿಸಿ | ಕಾಳಗಿಯಲ್ಲಿ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ

ಬಕ್ರೀದ್ ಹಿನ್ನೆಲೆ ಕಾಳಗಿಯಲ್ಲಿ ಶಾಂತಿ ಸಭೆ

ಕಾಳಗಿ: ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಸಹಕಾರದೊಂದಿಗೆ ಆಚರಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಸಿಪಿಐ ಜಗದೇವಪ್ಪ ಪಾಳಾ ಸಾರ್ವಜನಿಕರಿಗೆ ಕರೆ ನೀಡಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಸೋಮವಾರ ಬಕ್ರೀದ್ ಹಬ್ಬದ ಅಂಗವಾಗಿ ಆಯೋಜಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಧರ್ಮದ ಸಾಮಾಜಿಕ ವ್ಯವಸ್ಥೆಗೆ ಧಕ್ಕೆ ಬಾರದಂತೆ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.

ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಪರಸ್ಪರ ಗೌರವ ಮತ್ತು ಸಹಬಾಳ್ವೆಯ ಮನೋಭಾವದಿಂದ ಹಬ್ಬ ಆಚರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಪಿಎಸ್‌ಐ ತಿಮ್ಮಯ್ಯ ಬಿ.ಕೆ., ತಾಪಂ ಇಒ ಬಸಲಿಂಗಪ್ಪ ಡಿಗ್ಗಿ, ಉಪ ತಹಸೀಲ್ದಾರ್ ಮಾಣಿಕ್ ಘತ್ತರಗಿ, ದತ್ತು ಕಲಾಲ, ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್ ಕಿಟ್ಟದ, ಗುರುರಾಜ್ ಮದ್ದೂರ, ದತ್ತು ಗುತ್ತೇದಾರ, ಶರಣಪ್ಪ ಬೇಲೂರ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ಇದಲ್ಲದೆ ಮಹಮ್ಮದ್ ಗೂಡುಸಾಬ್, ಪರಮೇಶ್ವರ ಮಡಿವಾಳ, ಸುಂದರ ಸಾಗರ, ಮುನೀರ್ ಬಿಜಾಪುರ ಸೇರಿದಂತೆ ಹಲವು ಗಣ್ಯರು, ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button