ಕಲಬುರಗಿಜಿಲ್ಲಾಸುದ್ದಿ

ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಲು ಆಗ್ರಹ

ಕಲಬುರಗಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿ ಬೌದ್ಧ ಉಪಾಸಕರ ಸಂಘದ ನೇತೃತ್ವದಲ್ಲಿ ಇಂದು ನಗರದಲ್ಲಿ ಪ್ರತಿಭಟನೆ ನಡೆಯಿತು.

ಮಲ್ಲಪ್ಪ ಹೊಸಮನಿ, ಅರ್ಜುನ ಭದ್ರೆ, ಹಣಮಂತ ಬೋಧನಕರ, ಎ.ಬಿ. ಹೊಸಮನಿ, ರಾಜು ಕಪನೂರ, ದಿನೇಶ ದೊಡ್ಡಮನಿ, ದೇವಿಂದ್ರ ಸಿನ್ನೂರ, ಪ್ರಕಾಶ ಮೂಲಭಾರತಿ, ಅರ್ಜುನ ಗೊಬ್ಬರ, ಸುರೇಶ ಹಾದಿಮನಿ, ಎಸ್.ಜಿ. ಭಾರತಿ, ಬಸವರಾಜ ಕಣ್ಣೂರ ಅವರ ನೇತೃತ್ವದಲ್ಲಿ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಯಮೂರ್ತಿ ಗವಾಯಿ ಅವರ ಮೇಲೆ ನಡೆದ ದಾಳಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ವಕೀಲ ರಾಕೇಶ್ ಕಿಶೋರ್ ವಿರುದ್ಧ ತಕ್ಷಣವೇ ದೇಶದ್ರೋಹದ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿದರು. ಬೌದ್ಧ ಉಪಾಸಕರು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.

Related Articles

Leave a Reply

Your email address will not be published. Required fields are marked *

Back to top button