ಕಲಬುರಗಿಜಿಲ್ಲಾಸುದ್ದಿ

ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಸಮಿತಿಯ ಗೌರವ ಅಧ್ಯಕ್ಷರಾಗಿ ಡಾ. ಶರಣಪ್ರಕಾಶ ಪಾಟೀಲ ಆಯ್ಕೆ

ಕಲಬುರಗಿ: ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಶರಣಕುಮಾರ ಮೋದಿ ಅವರ ಉಪಸ್ಥಿತಿಯಲ್ಲಿ, ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಸಮಿತಿ–2026ರ ಕಲಬುರಗಿ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಅತ್ಯಂತ ಒಮ್ಮತದಿಂದ ಆಯ್ಕೆ ಮಾಡಲಾಯಿತು.

ಸಮಿತಿಯ ಗೌರವ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸರ್ಕಾರದ ಜನಪ್ರಿಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರು ಹಾಗೂ ರಾಯಚೂರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಬಸವರಾಜ ಮಠಪತಿ (ಕಮಲಾಪೂರ), ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಸಾಲಿಮಠ ಮತ್ತು ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಹಿರೇಮಠ ಅವರನ್ನು ನೇಮಿಸಲಾಯಿತು.

ಬರುವ ಮಾರ್ಚ್ 1ರಂದು ಜರುಗುವ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿಶೇಷ ಉಪನ್ಯಾಸಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಭವ್ಯ ಮೆರವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಚಂದು ಪಾಟೀಲ, ಸಮಾಜದ ಮುಖಂಡರಾದ ಡಾ. ಕಿರಣ ದೇಶಮುಖ, ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ನಾಗಲಿಂಗಯ್ಯ ಮಠಪತಿ, ಖಜಾಂಚಿ ಚನ್ನಪ್ಪಾ ದಿಗ್ಗಾಂವಿ, ಪ್ರಮುಖರಾದ ರುದ್ರಮುನಿ ಮಠಪತಿ (ಕೊಂಚೂರು), ಮೃತ್ಯುಂಜಯ ಪಲ್ಲಾಪೂರಮಠ, ಅಣವೀರ ಪಾಟೀಲ (ಕಾಳಗಿ), ಚನ್ನವೀರ ಹಿರೇಮಠ, ಅನಂದ ಲೇಂಗಟಿ, ಗಂಗಾಧರ ಹಿರೇಮಠ, ಭಾಗಣ್ಣ ಸ್ವಾಧಿ, ವಿ.ಆರ್. ಸ್ವಾಮಿ, ಗುರುನಂಜಯ್ಯ ವೀರಣ್ಣಗುಡಿ, ಮಂಜುನಾಥ ಹಿರೇಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button