ಅಂಬೇಡ್ಕರ್ 135ನೇ ಜಿಲ್ಲಾ ಜಯಂತ್ಯೋತ್ಸವ ಯಶಸ್ವಿ: ಅಶೋಕ ವೀರನಾಯಕ

ಕಲಬುರಗಿ: ನಗರದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ 135ನೇ ಜಿಲ್ಲಾ ಜಯಂತ್ಯೋತ್ಸವವನ್ನು ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು.
ಜಯಂತ್ಯೋತ್ಸವಕ್ಕೆ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡುವ ಮೂಲಕ ಆರಂಭವಾಗಿದ್ದು, ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಿದವು. ಮೂರು ದಿನಗಳ ಕಾಲ ನಡೆದ ಬಹಿರಂಗ ಸಭೆಗಳಲ್ಲಿ ವಿವಿಧ ಮಠಾಧೀಶರು, ರಾಜಕೀಯ ಮುಖಂಡರು ಮತ್ತು ಪ್ರಗತಿಪರ ಚಿಂತಕರು ಪಾಲ್ಗೊಂಡು ಅಂಬೇಡ್ಕರರ ತತ್ವಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳ ಕುರಿತು ಬೆಳಕು ಚೆಲ್ಲಿದರು.
ನಗರದ ವಿವಿಧ ಬಡಾವಣೆಗಳಿಂದ ವರ್ಣರಂಜಿತ ಮೆರವಣಿಗೆಗಳು ನಡೆದವು. ಸಾವಿರಾರು ಜನರು ಭಾಗವಹಿಸಿ ಜಯಂತಿಯನ್ನು ಹಬ್ಬದ ವಾತಾವರಣದಲ್ಲಿ ಆಚರಿಸಿದರು.
ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಜಿಲ್ಲಾ ಆಡಳಿತ, ನಗರ ಪೊಲೀಸ್ ಇಲಾಖೆ ಹಾಗೂ ವಿವಿಧ ಸಮಾಜದ ಮುಖಂಡರಿಗೆ ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ಅಶೋಕ ವೀರನಾಯಕ ಪತ್ರಿಕಾ ಪ್ರಕಟಣೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.




