ಕಲಬುರಗಿಜಿಲ್ಲಾಸುದ್ದಿ

“ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ನೀಡಿ” – ಕಾಂಗ್ರೆಸ್ ಹೈಕಮಾಂಡ್‌ಗೆ ಮಾರುತಿ ಹುಳಗೊಳಕರ್ ಆಗ್ರಹ!

ಚಿತ್ತಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಷ್ಟೇ ಪ್ರಿಯಾಂಕ್ ಖರ್ಗೆ ಅವರೂ ಕೂಡ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಹೊಸದಾಗಿ ರಚನೆಯಾಗಲಿರುವ ಸಚಿವ ಸಂಪುಟದಲ್ಲಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಮಾರುತಿ ಹುಳಗೊಳಕರ್ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್ಐ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಪ್ರಕರಣಗಳನ್ನು ಧೈರ್ಯವಾಗಿ ಜನರ ಮುಂದಿಟ್ಟ ನಾಯಕ ಪ್ರಿಯಾಂಕ್ ಖರ್ಗೆ ಎಂದು ಹೇಳಿದರು. ಅವರ ಹೋರಾಟ ಹಾಗೂ ಜನಪರ ಧ್ವನಿಯ ಪರಿಣಾಮವಾಗಿಯೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು’ ಎಂದು ತಿಳಿಸಿದರು.

ಪ್ರಿಯಾಂಕ್ ಖರ್ಗೆ ಅವರು ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಎಂಬ ಗುರುತಿಗಿಂತಲೂ ಸ್ವಂತ ಪರಿಶ್ರಮ, ದಕ್ಷ ಆಡಳಿತ ಹಾಗೂ ಅಭಿವೃದ್ಧಿ ಪರ ಚಿಂತನೆಗಳ ಮೂಲಕ ತಮ್ಮದೇ ಆದ ರಾಜಕೀಯ ಪ್ರಭಾವ ಬೆಳೆಸಿಕೊಂಡಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ’ ಎಂದು ಹೇಳಿದರು.

ಇಂತಹ ಯುವ ನಾಯಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ರಾಜ್ಯದ ಯುವ ಸಮುದಾಯಕ್ಕೆ ಹಾಗೂ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಸಿಗಲಿದೆ. ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಲ್ಲಿಯೂ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬ ಕೂಗು ಕೇಳಿಬರುತ್ತಿದೆ’ ಎಂದು ಅವರು ಅಭಿಪ್ರಾಯಪಟ್ಟರು.

ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಪ್ರಿಯಾಂಕ್ ಖರ್ಗೆ ಅವರ ಸೇವೆ, ಹೋರಾಟ ಮತ್ತು ಸಾಮರ್ಥ್ಯವನ್ನು ಪರಿಗಣಿಸಿ ತಕ್ಷಣವೇ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಾರುತಿ ಹುಳಗೊಳಕರ್ ಆಗ್ರಹಿಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button