ಕಲಬುರಗಿಜಿಲ್ಲಾಸುದ್ದಿ

ಕನ್ನಡದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ‘ಗುಣಾಗ್ರಣಿ ಪ್ರಶಸ್ತಿ’

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಸ್ನೇಹ ಹೆಬ್ಬಾಳ್ಕರ್ ಅವರಿಗೆ ‘ಗುಣಾಗ್ರಣಿ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.

ಸ್ನೇಹ ಹೆಬ್ಬಾಳ್ಕರ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕ್ಯಾಂಬಲ್ ಶಾಲೆಗೆ ಪ್ರಥಮ ಸ್ಥಾನ ತಂದುಕೊಟ್ಟಿದ್ದಾರೆ. ಅವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ವಿಜಯಕುಮಾರ ತೆಗಲತಿಪ್ಪಿ, ಧರ್ಮರಾಜ ಜವಳಿ ಸೇರಿದಂತೆ ಗಣ್ಯರು, ಶಿಕ್ಷಕರು ಹಾಗೂ ಪಾಲಕರು ಉಪಸ್ಥಿತರಿದ್ದು, ಸ್ನೇಹ ಅವರ ಸಾಧನೆಯನ್ನು ಅಭಿನಂದಿಸಿದರು. ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

Show More

Related Articles

Leave a Reply

Your email address will not be published. Required fields are marked *

Back to top button