ಬಿಎಡ್ ಕಾಲೇಜಿನಲ್ಲಿ ರ್ಯಾಂಕ್ ವಿದ್ಯಾರ್ಥಿನಿಗೆ ಸನ್ಮಾನ, ನೂತನರಿಗೆ ಸ್ವಾಗತ

ಕಲಬುರಗಿ :ನಗರದ ನಾಗಂಬಿಕಾ ಬಿಎಡ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯಕ್ಕೆ 6ನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಮಂದಾರ ಹಾಗೂ ಅವರ ತಂದೆ ಅಂಬಣ್ಣ ತಳವಾರ ಅವರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾ ರಂಭವೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲ ಯದ ಶಿವರಾಚಪ್ಪ ವಾಲಿ ವಹಿಸಿದ್ದರು. ಅತಿಥಿಗಳಾಗಿ ಉಪನ್ಯಾಸಕರಾದ ರಾಚಪ್ಪ ಭದ್ರಶೆಟ್ಟಿ ಭಾಗವಹಿಸಿದ್ದು, ನವ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಧ್ಯಕ್ಷೀಯ ಭಾಷಣದಲ್ಲಿ ಶಿವರಾಚಪ್ಪ ವಾಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಗುರುಗಳ ಮಾರ್ಗದ ರ್ಶನ ದಲ್ಲಿ ನಡೆದುಕೊಂಡರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಗುರುಗಳನ್ನು ಭಯದಿಂದಲ್ಲ, ಭರವಸೆಯಿಂದ ನೋಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸಕರಾದ ರಾಚಪ್ಪ ಭದ್ರಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಎಲ್ಲಾ ಚಿಂತೆಗಳನ್ನು ಮರೆತು ತಮ್ಮ ಗುರಿಯ ಕಡೆಗೆ ಮುನ್ನಡೆಯಬೇಕು. ಶ್ರಮ ಮತ್ತು ಆತ್ಮವಿಶ್ವಾಸದಿಂದ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.
ಉದ್ಘಾಟಕರಾದ ದಯಾನಂದ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳಿಗೆ ಓದುವ ಆಸಕ್ತಿ ಅತ್ಯಂತ ಮುಖ್ಯ. ಉತ್ತಮ ಗುರುಗಳ ಮಾರ್ಗದರ್ಶನದಿಂದ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ದೇಶದ ಭವಿಷ್ಯ ರೂಪಿಸುವ ಶಿಕ್ಷಕರಾಗಬೇಕು ಎಂದು ಕರೆ ನೀಡಿದರು.
ವಿಶೇಷವಾಗಿ ರೈತರ ಮಕ್ಕಳು ಶಿಕ್ಷಕರಾಗಿ ಸಮಾಜದಲ್ಲಿ ವಿದ್ಯೆ ಹಾಗೂ ಮೌಲ್ಯಗಳ ಬೆಳವಣಿಗೆಗೆ ಕೈಜೋಡಿಸಬೇಕು ಎಂದರು.ಪ್ರಾಚಾರ್ಯರಾದ ಡಾ. ಅರವಿಂದ್ ಕುಮಾರ್ ಬಿರಾದರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಅತಿಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಕಾಲೇಜಿನ ಶಿಕ್ಷಕರು ಉತ್ತಮ ಸೇವೆ ಸಲ್ಲಿಸುತ್ತಿದ್ದು, ವಿವಿಧ ಸಂಘಟ ನೆಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ರೇಣುಕಾ ಪುರಾಣಿಕ, ಶ್ವೇತಾ ಸಾಲಿಮಠ ಹಾಗೂ ರಾಜೇಶ್ವರಿ ಚೌವ್ಹಾಣ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ದ್ವಿತೀಯ ವರ್ಷದ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳಿಗೆ ಹೂವು ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ವಿಜಯಕುಮಾರ್ ಮಡಿವಾಳ, ಸಂ ತೋಷ್ ರಾಥೋಡ್, ಸಬಿಯಾ ಸುಲ್ತಾನಾ, ಮಹಾನಂದ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


