ಕಲಬುರಗಿಜಿಲ್ಲಾಸುದ್ದಿ

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮ ಆಂಗ್ಲ ಶಾಲೆಯಲ್ಲಿ : ಆಕ್ಷೇಪ

ಚಿತ್ತಾಪುರ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶನಿವಾರ ಹಮ್ಮಿಕೊಂಡಿರುವ ಕಾರ್ಯಕ್ರಮವು ಆಂಗ್ಲ ಮಾಧ್ಯಮದ ಶಾಲೆಯಲ್ಲಿ ಆಯೋಜಿಸುವ ಮೂಲಕ ಕನ್ನಡ ಭಾಷೆಗೆ ಅವಮಾನ ಮಾಡಲಾಗಿದೆ ಎಂದು ತಾಲೂಕಾ ಜೈ ಕರ್ನಾಟಕ ಮಾಜಿ ಅಧ್ಯಕ್ಷ ಮಲ್ಲಿನಾಥ ಇಂದೂರು ಅವರು ಆಕ್ಷೇಪ ವ್ಯಕ್ತ ಮಾಡಿದ್ದಾರೆ.

ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಕೊಡುಗೆ ನೀಡಿರುವ ಮತ್ತು ಶ್ರಮಿಸುತ್ತಿರುವವರನ್ನು ಗುರುತಿಸಿ ಪರಿಷತ್ತಿನಿಂದ ಸನ್ಮಾನಿಸಿ, ಪ್ರಶಸ್ತಿ ನೀಡಿ ಗೌರವಿಸುವುದು ಪರಿಷತ್ತಿನ ಸಂಪ್ರದಾಯ.

ಅದನ್ನು ಮೀರಿ ಆಂಗ್ಲ ಭಾಷೆಯಲ್ಲಿ ಬೋಧನೆ ಮಾಡುವ ಉಪನ್ಯಾಸಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಕನ್ನಡ ಭಾಷೆ ಬೋಧಿಸುವ ಶಿಕ್ಷಕರು, ಉಪನ್ಯಾಸಕರಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಖಂಡಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಕೇಳಿದಾಗ ತಾಲೂಕಾ ಅಧ್ಯಕ್ಷರಿಗೆ ಕೇಳಿ ಎಂದು ಹಾರಿಕೆ ಉತ್ತರ ನೀಡಿದ್ದಾರೆ. ತಾಲೂಕಾ ಅಧ್ಯಕ್ಷರಿಗೆ ಕೇಳಿದರೆ ಆಗಿರುವ ತಪ್ಪು ಮುಂದಿನ ಕಾರ್ಯಕ್ರಮದಲ್ಲಿ ಸರಿಪಡಿಸಿಕೊಳ್ಳೋಣ ಎಂದು ಹೇಳುವ ಮೂಲಕ ತಪ್ಪು ಒಪ್ಪಿಕೊಂಡು ಕನ್ನಡ ಭಾಷೆಗೆ ಮಾಡಿರುವ ಅವಮಾನ ಸಮರ್ಥಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತ ಮಾಡಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button