ಕಲಬುರಗಿಜಿಲ್ಲಾಸುದ್ದಿ

ಮುಂಗಾರು ಆರಂಭ: ನಕಲಿ ಬೀಜಗಳ ಹಾವಳಿ ಹೆಚ್ಚಳ! |ರೈತರಿಗೆ ಶ್ರೀಮಂತ ಮಾವನೂರ್ ಸಲಹೆ

ಕಲಬುರಗಿ: ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಬಿತ್ತನೆ ಕಾರ್ಯಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ನಕಲಿ ಹಾಗೂ ಕಳಪೆ ಗುಣಮಟ್ಟದ ಬೀಜಗಳ ಮಾರಾಟ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ ಎಂದು ರಾಷ್ಟ್ರೀಯ ಸಮಾಜ ಪಕ್ಷದ ಕಲಬುರಗಿ ಜಿಲ್ಲಾ ಅಧ್ಯಕ್ಷ ಶ್ರೀಮಂತ ಬಿ. ಮಾವನೂರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಲ ಮಾಡಿ ಬೀಜಗಳನ್ನು ಖರೀದಿಸುವ ರೈತರು ನಕಲಿ ಅಥವಾ ಕಳಪೆ ಗುಣಮಟ್ಟದ ಬೀಜಗಳಿಂದ ಮೋಸ ಹೋಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ರೈತರು ಸರ್ಕಾರದ ಮಾನ್ಯತೆ ಪಡೆದ ಹಾಗೂ ಗುಣಮಟ್ಟ ಪರೀಕ್ಷೆಗೆ ಒಳಪಟ್ಟ ಬೀಜಗಳನ್ನು ಮಾತ್ರ ಖರೀದಿಸಬೇಕು ಎಂದು ಸಲಹೆ ನೀಡಿದ್ದಾರೆ.

ಬೀಜ ಖರೀದಿಸುವ ಸಂದರ್ಭದಲ್ಲಿ ಕಂಪನಿಯ ಹೆಸರು, ಉತ್ಪಾದನಾ ವಿವರಗಳು, ಲೇಬಲ್, ಅವಧಿ ಹಾಗೂ ಗುಣಮಟ್ಟದ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಜೊತೆಗೆ ಕೃಷಿ ಇಲಾಖೆಯ ಅಧಿಕೃತ ಮಾಹಿತಿ ಪಡೆದು ಬೀಜಗಳನ್ನು ಖರೀದಿಸುವುದು ಸುರಕ್ಷಿತ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಮಧ್ಯವರ್ತಿಗಳು ಅಥವಾ ಕಂಪನಿಗಳ ಪ್ರಭಾವಕ್ಕೆ ಒಳಗಾದ ವ್ಯಕ್ತಿಗಳಿಂದ ತಪ್ಪು ಮಾಹಿತಿ ನೀಡುವ ಘಟನೆಗಳು ವರದಿಯಾಗಿವೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ರೈತರು ಒಂದೇ ಮೂಲದ ಮಾಹಿತಿಯನ್ನು ನಂಬದೇ ವಿವಿಧ ಮೂಲಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಸ್ಥಳೀಯ ಹವಾಮಾನ ಹಾಗೂ ಮಣ್ಣಿನ ಗುಣಮಟ್ಟಕ್ಕೆ ಹೊಂದುವ ಬೀಜ ತಳಿಗಳನ್ನು ಆಯ್ಕೆ ಮಾಡಿಕೊಂಡಲ್ಲಿ ಉತ್ತಮ ಉತ್ಪಾದನೆ ಸಾಧ್ಯವಾಗುತ್ತದೆ. ರೈತರ ಜಾಗೃತಿಯೇ ನಕಲಿ ಬೀಜಗಳ ಹಾವಳಿಯನ್ನು ತಡೆಯುವ ಪ್ರಮುಖ ಮಾರ್ಗವಾಗಿದೆ ಎಂದು ಶ್ರೀಮಂತ ಬಿ. ಮಾವನೂರ್ ತಿಳಿಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button