ಕಲಬುರಗಿಜಿಲ್ಲಾಸುದ್ದಿ
ಕಲಬುರಗಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಕಲಬುರಗಿ: ನಗರದ ರಾಮಮಂದಿರ ಹತ್ತಿರವಿರುವ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಕರ್ನಾಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಭಾನುವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಎಪಿಎಂಸಿ ಕಲಬುರಗಿಯ ಮಾಜಿ ಅಧ್ಯಕ್ಷ ಅವ್ವಣ್ಣ ಮ್ಯಾಕೇರಿ, ತಳವಾರ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಕಾಂತ ತಳವಾರ, ಜಿಲ್ಲಾ ಕಾರ್ಯದರ್ಶಿ ರಾಜೇಂದ್ರ ರಾಜವಾಳ, ಅಫಜಲಪೂರ ತಾಲೂಕು ಅಧ್ಯಕ್ಷ ಗುರುನಾಥ ಹಾವನೂರ, ನಗರ ಉಪಾಧ್ಯಕ್ಷ ರವಿ ಡೊಂಗರಗಾಂವ, ಶರಣು ತಳವಾರ, ನಾಗರಾಜ ನಂದೂರ, ಪ್ರೇಮ ಕೋಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.