ಕಲಬುರಗಿಜಿಲ್ಲಾಸುದ್ದಿ

ಜೆಡಿಎಸ್ ಕಲಬುರಗಿ ಜಿಲ್ಲಾ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಮಾಣಿಕಪ್ರಭು ಶಹಾಪೂರಕರ್ ನೇಮಕ

ಕಲಬುರಗಿ: ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಕಲಬುರಗಿ ಜಿಲ್ಲಾ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಮಾಣಿಕಪ್ರಭು ಶಹಾಪೂರಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಾಲರಾಜ ಗುತ್ತೇದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೂತನವಾಗಿ ಜವಾಬ್ದಾರಿ ವಹಿಸಿಕೊಂಡಿರುವ ಮಾಣಿಕಪ್ರಭು ಶಹಾಪೂರಕರ್ ಅವರು ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಲಬುರಗಿ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ನೇಮಕದಿಂದ ಜಿಲ್ಲೆಯ ಹಿಂದುಳಿದ ವರ್ಗಗಳ ಸಂಘಟನೆಗೆ ಮತ್ತಷ್ಟು ಬಲ ದೊರೆಯಲಿದ್ದು, ಪಕ್ಷದ ಚಟುವಟಿಕೆಗಳಿಗೆ ಹೊಸ ಚೈತನ್ಯ ಸಿಗಲಿದೆ ಎಂದು ಪಕ್ಷದ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button