ನೂತನ ಅಧ್ಯಕ್ಷ ದೇವಿಂದ್ರ ಅರಣಕಲ್ರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಗೌರವ ಸನ್ಮಾನ

ಚಿತ್ತಾಪುರ:ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ದೇವಿಂದ್ರ ಎಂ. ಅರಣಕಲ್ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ಅವರನ್ನು ಬೆಂಗಳೂರಿನ ಸರ್ಕಾರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಗೌರವ ಸನ್ಮಾನ ಸಲ್ಲಿಸಿದರು.
ದೇವಿಂದ್ರ ಅರಣಕಲ್ ಅವರು ಸಚಿವರಿಗೆ ಬುದ್ಧನ ಪ್ರತಿಮೆ ನೀಡಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೋಲಿ ಕಬ್ಬಲಿಗ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನರ್, ತಾಪಂ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ ಭಾಗೋಡಿ, ಎಪಿಎಂಸಿ ಮಾಜಿ ಸದಸ್ಯ ಹಣಮಂತ ಸಂಕನೂರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.


