ಕಲಬುರಗಿಜಿಲ್ಲಾಸುದ್ದಿ

ಗುಂಡಗುರ್ತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಭೇಟಿ

ಚಿತ್ತಾಪುರ: ತಾಲೂಕಿನಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಂಡಗುರ್ತಿ ಗ್ರಾಮದ ಮನೆಗಳಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ದವಸ ಧಾನ್ಯ ಸೇರಿದಂತೆ ಇನ್ನಿತರ ಸಾಮಾಗ್ರಿಗಳು ಸಂಪೂರ್ಣ ಹಾಳಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ನಂತರ ಗ್ರಾಮದ ಪ್ರಮುಖ ರಸ್ತೆ ಸೇರಿದಂತೆ ಮನೆಗಳಲ್ಲಿ ನೀರು ಹೊಕ್ಕಿ ಅನಾಹುತ ಸಂಭವಿಸಿದ ಪ್ರತಿಯೊಬ್ಬರ ಮನೆಗೆ ಭೇಟಿ ನೀಡಿ, ಏನೆಲ್ಲ ಸಮಸ್ಯೆಗಳಾಗಿವೆ ಎನ್ನುವುದರ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ಹಳ್ಳದ ನಾಲಾ ಸ್ವಚ್ಛತೆ ಕೈಗೊಳ್ಳಲು ಸ್ಥಳದಲ್ಲೇ ಇದ್ದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ಸಹಾಯಕ ಆಯುಕ್ತ ಸಾಹಿತ್ಯ ಆಲದಕಟ್ಟೆ, ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್, ತಹಶೀಲ್ದಾರ್ ನಾಗಯ್ಯ ಹಿರೇಮಠ, ತಾಪಂ ಇಓ ಮುಹಮ್ಮದ್ ಅಕ್ರಂ ಪಾಷಾ ಸೇರಿದಂತೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

Related Articles

Leave a Reply

Your email address will not be published. Required fields are marked *

Back to top button