ಜಿಲ್ಲಾಸುದ್ದಿಗಳು

ವಿಕಾಸಶೀಲ ಇನ್ಸಾನ್ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶಾಂತಪ್ಪ ಕೂಡಿ ನೇಮಕ

ಕಲಬುರಗಿ: ವಿಕಾಸಶೀಲ ಇನ್ಸಾನ್ ಪಾರ್ಟಿ (ವಿಐಪಿ) ಕರ್ನಾಟಕ ರಾಜ್ಯ ಘಟಕವು ಸಮಾಜಸೇವಕ ಶಾಂತಪ್ಪ ಕೂಡಿ ಅವರನ್ನು ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದೆ.

ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಬಿ.ಕೆ. ಮೋಹನ್ ಕುಮಾರ್ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ಸಮಾಜಮುಖಿ ಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ನಾಯಕತ್ವವನ್ನು ಪರಿಗಣಿಸಿ ಶಾಂತಪ್ಪ ಕೂಡಿ ಅವರಿಗೆ ಈ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಾಂತಪ್ಪ ಕೂಡಿ ಅವರ ಅನುಭವ ಮತ್ತು ಮಾರ್ಗದರ್ಶನದೊಂದಿಗೆ ಪಕ್ಷದ ಸಿದ್ಧಾಂತ, ತತ್ವಗಳು ಹಾಗೂ ಶಿಸ್ತನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಜೊತೆಗೆ ಕಲಬುರಗಿ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ವಿಶ್ವಾಸವನ್ನು ಪಕ್ಷ ವ್ಯಕ್ತಪಡಿಸಿದೆ.

ನೇಮಕಾತಿಯ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಬಿ.ಕೆ. ಮೋಹನ್ ಕುಮಾರ್ ಅವರು ಶಾಂತಪ್ಪ ಕೂಡಿ ಅವರಿಗೆ ಅಭಿನಂದನೆ ಸಲ್ಲಿಸಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಪಕ್ಷದ ಸಂಘಟನೆ ಹಾಗೂ ಜನಸೇವಾ ಚಟುವಟಿಕೆಗಳ ವಿಸ್ತರಣೆಗೆ ಶ್ರಮಿಸುವಂತೆ ಶುಭ ಹಾರೈಸಿದ್ದಾರೆ.

ಈ ನೇಮಕಾತಿಯಿಂದ ವಿಕಾಸಶೀಲ ಇನ್ಸಾನ್ ಪಾರ್ಟಿಯ ಸಂಘಟನೆ ಕಲಬುರಗಿ ಜಿಲ್ಲೆಯಲ್ಲಿ ಇನ್ನಷ್ಟು ಬಲಗೊಳ್ಳಲಿದ್ದು, ಜನಸೇವಾ ಕಾರ್ಯಕ್ರಮಗಳಿಗೆ ಹೊಸ ಚೈತನ್ಯ ದೊರೆಯಲಿದೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button