ಕನಿಷ್ಠ ವೇತನ ಅಧಿಸೂಚನೆ ಜಾರಿಗೆ ಆಗ್ರಹಿಸಿ ಬಿಎಂಎಸ್ ಪ್ರತಿಭಟನೆ

ಅಧಿಸೂಚನೆ ಹೊರಡಿಸಿದ್ದು, ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಅದನ್ನು ಹಿಂಪಡೆಯಲು ಮುಂದಾಗಿರುವುದು ಖಂಡನೀಯ. ಅಧಿಸೂಚನೆಯನ್ನು ಹಿಂಪಡೆಯದೆ ತಕ್ಷಣ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಕಾರ್ಮಿಕರಿಗೆ ಗೌರವಧನ ಹೆಚ್ಚಿಸಿ ಖಾಯಂಗೊಳಿಸಬೇಕು. ಆರೋಗ್ಯ ಇಲಾಖೆಯ ಒಳ ಹಾಗೂ ಹೊರಗುತ್ತಿಗೆ ನೌಕರರನ್ನು ಸೇವಾ ಹಿರಿತನದ ಆಧಾರದ ಮೇಲೆ ಖಾಯಂಗೊಳಿಸಬೇಕು. ಸರ್ಕಾರಿ ಇಲಾಖೆಗಳ ಒಳ ಮತ್ತು ಹೊರಗುತ್ತಿಗೆ ಪದ್ಧತಿ ಕೈಬಿಡಬೇಕು ಎಂದು ಆಗ್ರಹಿಸಿದರು.
ಇಪಿಎಫ್-95 ಪಿಂಚಣಿಯನ್ನು ₹1,000ರಿಂದ ₹7,500ಕ್ಕೆ ಹೆಚ್ಚಿಸಬೇಕು. ಇಎಸ್‌ಐ ವ್ಯಾಪ್ತಿಯ ವೇತನ ಮಿತಿಯನ್ನು ₹21,000ರಿಂದ ₹42,000ಕ್ಕೆ ಏರಿಸಬೇಕು. ಇಪಿಎಫ್ ವಂತಿಗೆ ಮಿತಿಯನ್ನು ₹15,000ರಿಂದ ₹30,000ಕ್ಕೆ ಹೆಚ್ಚಿಸಬೇಕು. ಬೋನಸ್ ಮಿತಿಯನ್ನು ₹7,000ರಿಂದ ₹18,000ಕ್ಕೆ ಏರಿಸಬೇಕು. ಉಪಧನದ ಅವಧಿಯನ್ನು 15 ದಿನಗಳಿಂದ ಒಂದು ತಿಂಗಳಿಗೆ ಹಾಗೂ ಗರಿಷ್ಠ ಮಿತಿಯನ್ನು ₹20 ಲಕ್ಷದಿಂದ ₹40 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಎಲ್ಲಾ ಕ್ಷೇತ್ರಗಳ ಕಾರ್ಮಿಕರಿಗೆ ಇಪಿಎಫ್ ಹೆಚ್ಚುವರಿ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ಪದ್ಧತಿ ಜಾರಿಗೆ ತರಬೇಕು. ಕಟ್ಟಡ ಕಾರ್ಮಿಕರ ಮಂಡಳಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಎಂಎಸ್ ಜಿಲ್ಲಾ ಅಧ್ಯಕ್ಷ ಶ್ರೀಕಾಂತ ಸ್ವಾಮಿ, ಕಾರ್ಯದರ್ಶಿ ಸಂತೋಷ ಕುಂಗಿ, ಸಹ ಕಾರ್ಯದರ್ಶಿ ಶಿವರಾಜ ವಾರಿಕ್, ಹಿರಿಯರಾದ ಶಂಕರ ಸುಲೇಗಾಂವ, ಸುಗುಣ ಅವಂತಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಾರ್ಮಿಕರ ಹಕ್ಕುಗಳು, ನ್ಯಾಯಯುತ ಬೇಡಿಕೆಗಳು ಹಾಗೂ ಸುಭದ್ರ ಭವಿಷ್ಯಕ್ಕಾಗಿ ಒಗ್ಗಟ್ಟಾಗಿ ಹೋರಾಡುವಂತೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.



