ಬರ ಘೋಷಣೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸಮರ್ಪಕ ಪರಿಹಾರ ನೀಡುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬರದ ಪರಿಣಾಮ ಜಿಲ್ಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ರೈತರ ನೆರವಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ಕೃಷಿ ಚಟುವಟಿಕೆಗಳಿಗೆ ಅಗತ್ಯ ನೆರವು ಕಲ್ಪಿಸುವುದು ಸೇರಿದಂತೆ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಮುಖಂಡರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೆಲ್ಕೂರ, ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ, ನಗರ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ, ಮುಖಂಡರಾದ ನಿತೀನ್ ಗುತ್ತೇದಾರ, ಶರಣಪ್ಪ ತಳವಾರ, ಗಿರಿರಾಜ್ ಯಳಮೇಲಿ, ರಾಘವೇಂದ್ರ ಕುಲಕರ್ಣಿ, ಡಾ. ಇಂದಿರಾ ಶಕ್ತಿ, ವಿಜಯಲಕ್ಷ್ಮೀ ಗೋಬುರಕರ್, ಡಾ. ಸುಧಾ ಹಾಲಕಾಯಿ, ಅವಿನಾಶ ಮಾಕೇರಿ, ಸದ್ಧಾಂ ವಜೀರಗಾಂವ್, ವಿಶಾಲ ಧರ್ಗಿ, ಅರುಣಕುಮಾರ ಪಾಟೀಲ, ಸಂತೋಷ ಹಾದಿಮನಿ, ನಾಗರಾಜ ಮಹಾಗಾಂವಕರ್, ಶ್ರೀನಿವಾಸ ದೇಸಾಯಿ, ರವಿಚಂದ್ರ ಕಾಂತಿಕರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.



