ರಾಜ್ಯ

KPSC ಅಕ್ರಮ ನೇಮಕಾತಿ: IAS ಅಧಿಕಾರಿ ಜಾಮೀನು ಅರ್ಜಿ; ಸೆ.15ಕ್ಕೆ ವಿಚಾರಣೆ

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಆರೋಪಿಯಾಗಿರುವ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರಿನ 52ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಬಿಎನ್‌ಎಸ್‌ಎಸ್‌ (BNSS) ಸೆಕ್ಷನ್‌ 483ರ ಅಡಿ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸಿಐಡಿ ಪರ ವಕೀಲರಿಗೆ ನೋಟಿಸ್‌ ನೀಡಿದೆ. ಸೆಪ್ಟೆಂಬರ್‌ 15ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಆಕ್ಷೇಪಣೆ ಸಲ್ಲಿಕೆಯ ಬಳಿಕ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ 15ಕ್ಕೆ ಮುಂದೂಡಿ 52ನೇ ಸಿಸಿಹೆಚ್‌ ನ್ಯಾಯಾಲಯದ ನ್ಯಾಯಾಧೀಶೆ ನಿರ್ಮಲ ದೇವಿ ಅವರು ಆದೇಶಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button