ಕಲಬುರಗಿಜಿಲ್ಲೆ ಸುದ್ದಿ

ಮಹಿಳಾ ಉದ್ಯಮಶೀಲತೆಗೆ ಉತ್ತೇಜನ: ‘ಗೋಲ್ಡ್ ಹಬ್ಬ’ ವಿಶೇಷ ಕಾರ್ಯಕ್ರಮ

ಕಲಬುರಗಿ: ಮಹಿಳೆಯರಲ್ಲಿ ಉದ್ಯಮಶೀಲತೆ ಹಾಗೂ ಸ್ವಾವಲಂಬನೆಯನ್ನು ಬೆಳೆಸುವ ಉದ್ದೇಶದಿಂದ ಶೀತಲ್ ನಯನ್ ಗಿಲ್ಡ್ ಹಾಗೂ ಮಮತಾ ಪ್ರಕಾಶ್ ಗಿಲ್ಡ್ ಅವರ ಸಂಯುಕ್ತ ಆಶ್ರಯದಲ್ಲಿ ನಗರದ ಗೋಲ್ಡ್ ಹಬ್ಬದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶರಣಬಸವೇಶ್ವರ ದೇವಸ್ಥಾನದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್. ಅಪ್ಪ ಅವರು ರಿಬ್ಬನ್ ಕತ್ತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆಯರು ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯವನ್ನು ಉದ್ಯಮವಾಗಿ ರೂಪಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಮಹಿಳಾ ಉದ್ಯಮಶೀಲತೆಗೆ ಅಗತ್ಯವಾದ ಪ್ರೋತ್ಸಾಹ ಹಾಗೂ ಸೂಕ್ತ ವೇದಿಕೆಗಳು ದೊರೆತಾಗ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಭಾಗ್ಯಶ್ರೀ ಪಾಟೀಲ, ಜಯಶ್ರೀ ಮತ್ತಿಮೂಡ, ಲಕ್ಷ್ಮೀ ರೇವೂರ್, ದಾಮೋದರ ಗಿಲ್ಡ್, ನಯನ್ ಗಿಲ್ಡ್ ಹಾಗೂ ಗಗನ್ ಗಿಲ್ಡ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮಹಿಳೆಯರ ಉದ್ಯಮಶೀಲತೆ, ಪ್ರತಿಭೆ ಹಾಗೂ ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

Related Articles

Leave a Reply

Your email address will not be published. Required fields are marked *

Back to top button