ಕಲಬುರಗಿಜಿಲ್ಲೆ ಸುದ್ದಿ

ದಲಿತ ಸೇನೆ ಯುವ ಘಟಕದ ತಾಲೂಕು ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಆಯ್ಕೆ

ಚಿತ್ತಾಪುರ: ದಲಿತ ಸೇನೆ ಯುವ ಘಟಕದ ಚಿತ್ತಾಪುರ ತಾಲೂಕು ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ತಿಳಿಸಿದ್ದಾರೆ.

ತಾಲೂಕಿನಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಯುವ ಘಟಕದ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು. ದಲಿತರು ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ನೋವು–ನಲಿವುಗಳಿಗೆ ಧ್ವನಿಯಾಗಬೇಕು ಎಂದು ಅವರು ಸೂಚಿಸಿದ್ದಾರೆ.

ಅನ್ಯಾಯ, ಶೋಷಣೆ ಹಾಗೂ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಸಂಘಟಿತ ಹೋರಾಟ ರೂಪಿಸಿ, ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅಬ್ದುಲ್ ಖಾದರ್ ಅವರು ಕಾರ್ಯನಿರ್ವಹಿಸಬೇಕು ಎಂದು ಹಣಮಂತ ಯಳಸಂಗಿ ಆಶಿಸಿದ್ದಾರೆ.

ತಾಲೂಕಿನಲ್ಲಿ ದಲಿತ ಸೇನೆ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸಿ, ಸಾಮಾಜಿಕ ನ್ಯಾಯ ಹಾಗೂ ಸಮಾನತೆಗಾಗಿ ನಿರಂತರವಾಗಿ ಹೋರಾಟ ನಡೆಸುವ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ ಎಂದು ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button