ಕಲಬುರಗಿಕ್ರೀಡೆಜಿಲ್ಲೆ ಸುದ್ದಿ

ಚಿತ್ತಾಪುರದಲ್ಲಿ ಸೆ.15ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2026–27ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 15ರಂದು ಬೆಳಿಗ್ಗೆ 9 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್ ತಿಳಿಸಿದ್ದಾರೆ.

ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಯೋಗ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.

ಭಾಗವಹಿಸಲು ಇಚ್ಛಿಸುವ ಕ್ರೀಡಾಪಟುಗಳು https://dasaracmcup.in/ ವೆಬ್‌ಸೈಟ್ ಮೂಲಕ ಕಡ್ಡಾಯವಾಗಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯ ಜೆರಾಕ್ಸ್ ಪ್ರತಿಯನ್ನು ಆಯೋಜಕರಿಗೆ ಸಲ್ಲಿಸಬೇಕು. ಆನ್‌ಲೈನ್ ನೋಂದಣಿ ಮಾಡದವರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕ್ರೀಡಾಪಟುಗಳು ಸ್ವಯಂ ಇಚ್ಛೆಯಿಂದ ಭಾಗವಹಿಸಬೇಕು ಹಾಗೂ ಕರ್ನಾಟಕದ ನಿವಾಸಿಗಳಾಗಿರಬೇಕು. ರಕ್ಷಣಾ ಪಡೆ ಮತ್ತು ಅರೆಸೇನಾ ಪಡೆಗಳಿಗೆ ಸೇರಿದ ಕ್ರೀಡಾಪಟುಗಳಿಗೆ ಭಾಗವಹಿಸಲು ಅವಕಾಶವಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡವು ಒಮ್ಮೆ ತಾಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಬಳಿಕ ಬೇರೆ ತಾಲೂಕು ಅಥವಾ ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತಿಲ್ಲ.

ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿವೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.

ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ದಿನಭತ್ಯೆ ನೀಡಲಾಗುವುದಿಲ್ಲ. ಕ್ರೀಡಾಕೂಟದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದರೆ ಕ್ರೀಡಾಪಟುಗಳೇ ಜವಾಬ್ದಾರರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9945230160 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button