ಜಿಲ್ಲೆ ಸುದ್ದಿಯಾದಗಿರಿ

ಮುಖ್ಯೋಪಾಧ್ಯಾಯ ಬಸವರಾಜು ಮಲ್ಲೆ ಅವರಿಗೆ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ

ಕೆಂಭಾವಿ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ನಿಸ್ವಾರ್ಥ ಸೇವೆ, ಅತ್ಯುತ್ತಮ ಬೋಧನಾ ಕೌಶಲ್ಯ ಹಾಗೂ ಆಡಳಿತ ನಿರ್ವಹಣೆಯನ್ನು ಗುರುತಿಸಿ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಸವರಾಜು ಮಲ್ಲೆ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಗುರು ಶ್ರೇಷ್ಠ–ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸ್ಮರಣಾರ್ಥ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿರುವ ‘ಗುರು–ನಮನ’ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಮಕ್ಕಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡಿಸುವುದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವುದು ಸೇರಿದಂತೆ ಬಸವರಾಜು ಮಲ್ಲೆ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಸೆ. 20ರಂದು ಪ್ರಶಸ್ತಿ ಪ್ರದಾನ

ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಐತಿಹಾಸಿಕ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್)ದಲ್ಲಿ ಸೆಪ್ಟೆಂಬರ್ 20ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಗಣ್ಯರ ಉಪಸ್ಥಿತಿಯಲ್ಲಿ ಬಸವರಾಜು ಮಲ್ಲೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯಾಧ್ಯಕ್ಷ ಎಸ್. ರಾಮಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ರಮೇಶ ಎಸ್.ಜಿ. ತಿಳಿಸಿದ್ದಾರೆ.

ಪ್ರಶಸ್ತಿಗೆ ಭಾಜನರಾಗಿರುವ ಬಸವರಾಜು ಮಲ್ಲೆ ಅವರನ್ನು ಶಿಕ್ಷಣ ಪ್ರೇಮಿಗಳು, ಸಹ ಶಿಕ್ಷಕರು ಹಾಗೂ ಸಾರ್ವಜನಿಕರು ಅಭಿನಂದಿಸಿದ್ದಾರೆ.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button