ಯಾದಗಿರಿ

ಹುಣಸಗಿ-ಸುರಪುರ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಹುಣಸಗಿ: ಕನ್ನಡ ನಾಡು, ನುಡಿ ಹಾಗೂ ನೆಲ–ಜಲದ ರಕ್ಷಣೆಗೆ ಶ್ರಮಿಸುತ್ತಿರುವ ‘ನಮ್ಮ ಕರ್ನಾಟಕ ಸೇನೆ’ ಸಂಘಟನೆಯ ಹುಣಸಗಿ ಹಾಗೂ ಸುರಪುರ ತಾಲೂಕು ಮಹಿಳಾ ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಸಮಾರಂಭ ಪಟ್ಟಣದ ಗುಡ್‌ಲಕ್ ಹೋಟೆಲ್‌ನಲ್ಲಿ ನಡೆಯಿತು.

ಸಂಘಟನೆಯ ರಾಜ್ಯ ಅಧ್ಯಕ್ಷ ಎಂ. ಬಸವರಾಜ ಪಡುಕೋಟೆ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಪ್ರಧಾನ ಸಂಚಾಲಕ ಭೀಮಣ್ಣ ಶಖಾಪುರ ವಹಿಸಿದ್ದರು. ಯಾದಗಿರಿ ಜಿಲ್ಲಾಧ್ಯಕ್ಷ ವಿಶ್ವರಾಧ್ಯ ದಿಮ್ಮೆ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಹುಣಸಗಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ರೀದೇವಿ ಮೆಟ್ಟಿ ಹಾಗೂ ಸುರಪುರ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಂಗೀತಾ ಕೋತಿನ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸಂಘಟನೆಯ ಬಲವರ್ಧನೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮುಂದಿನ ದಿನಗಳಲ್ಲಿ ನಾಡು–ನುಡಿಯ ಉಳಿವು ಹಾಗೂ ಜನಪರ ಸಮಸ್ಯೆಗಳ ಪರಿಹಾರಕ್ಕಾಗಿ ಮಹಿಳಾ ಘಟಕ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಶ್ರೀದೇವಿ ಕಟ್ಟಿಮನಿ, ಹುಣಸಗಿ ತಾಲೂಕು ಅಧ್ಯಕ್ಷ ಭೀಮನಗೌಡ ಪೋ. ಪಾಟೀಲ, ಶಹಾಪುರ ತಾಲೂಕು ಅಧ್ಯಕ್ಷ ಸಿದ್ದು ಪಟ್ಟೇದಾರ, ಗುರುಮಠಕಲ್ ತಾಲೂಕು ಸಂಘಟನಾ ಕಾರ್ಯದರ್ಶಿ ಅಬ್ದುಲ್, ಕೆಂಭಾವಿ ಹೋಬಳಿ ಕಾರ್ಮಿಕ ಘಟಕದ ಅಧ್ಯಕ್ಷ ಗುರುರಾಜ ಅಂಗಡಿ, ಮುಖಂಡರಾದ ಸಂಗಮೇಶ ದೊರೆ ವಜ್ಜಲ್, ಭೀಮನಗೌಡ ಕಡದರಾಳ, ಅಂಬರೇಶ ನಾಯಕ ಬೈಲಕುಂಟಿ, ಶ್ರೀಶೈಲ ವಜ್ಜಲ್, ರಂಗಣ್ಣ ವಡ್ಡರ (ಕಂದಿಲ್), ಹಣಮಂತ ದೂರಿ, ಅಂಬರೀಶ ಸೊನ್ನಾಪುರ, ಪರಮಣ್ಣ ಗಿಂಡಿ, ತಿರುಪತಿ ಸಿದ್ದಾಪುರ ಸೇರಿದಂತೆ ವಿವಿಧ ತಾಲೂಕುಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button