ಜಿಲ್ಲೆ ಸುದ್ದಿಯಾದಗಿರಿ

ಉಪನ್ಯಾಸಕ ಉತ್ತಮ್ ಕುಮಾರ್ ಬನ್ನೇಕರಗೆ ರಾಜೀವ್‌ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

ಕೆಂಭಾವಿ: ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕೆಂಭಾವಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಉತ್ತಮ್ ಕುಮಾರ್ ಬನ್ನೇಕರ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಶಿಕ್ಷಕರ ಘಟಕದ ವತಿಯಿಂದ ನೀಡುವ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದ ‘ಭಾರತ್ ಜೋಡೋ’ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉತ್ತಮ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಶಿಕ್ಷಕರ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ, ಮಾಜಿ ಸಚಿವೆ ರಾಣಿ ಸತೀಶ್, ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ ಹಾಗೂ ತಿಮ್ಮಯ್ಯ ಪುರ್ಲೆ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉತ್ತಮ್ ಕುಮಾರ್ ಬನ್ನೇಕರ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ದೊರೆತಿರುವುದಕ್ಕೆ ಕಾಲೇಜಿನ ಪ್ರಾಚಾರ್ಯ ಅಶೋಕ್ ಕುಮಾರ್ ತಳಕೇರಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button