ಕಲಬುರಗಿಜಿಲ್ಲೆ ಸುದ್ದಿ

ಶಾಲಾ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಇತ್ತಿಹಾದ್-ಎ-ಮಿಲ್ಲತ್ ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಶಾಲೆಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ, ಸುರಕ್ಷತೆ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಇತ್ತಿಹಾದ್-ಎ-ಮಿಲ್ಲತ್ ಸಂಘಟನೆಯ ವತಿಯಿಂದ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನಾಕಾರರು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಬಿಇಒ ಅವರಿಗೆ ಮನವಿ ಸಲ್ಲಿಸಿ, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಶಿಕ್ಷಣ ಕ್ಷೇತ್ರದಲ್ಲಿನ ವಿವಿಧ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆಯೂ ಮನವಿ ಮಾಡಿದರು.

ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ, ಶಿಕ್ಷಣದ ಗುಣಮಟ್ಟ ಹಾಗೂ ಕಲ್ಯಾಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಅಧ್ಯಕ್ಷ ಶಾಹಿದ್ ಸಿದ್ದಿಕಿ, ಮಾಧ್ಯಮ ವಕ್ತಾರ ಖಾಲಿದ್ ಅಬ್ರಾರ್, ಉಪಾಧ್ಯಕ್ಷ ಅಜರ್ ಮುಬಾರಕ್, ಕಾರ್ಯದರ್ಶಿ ಸಾದಿಕ್ ಖಾನ್, ಸದಸ್ಯೆ ಶಾಹೀನ್ ಬೇಗಂ ಹಾಗೂ ಸಾಮಾಜಿಕ ಕಾರ್ಯಕರ್ತೆ ಸೈಯದಾ ಸಾದಿಯಾ ಸೇರಿದಂತೆ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button