ಕಲಬುರಗಿಜಿಲ್ಲೆ ಸುದ್ದಿ

ಅಕ್ಟೋಬರ್‌ ಅಂತ್ಯದಲ್ಲಿ 23ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಿ ಆಯೋಜಿಸಲು ಕಸಾಪ ಜಿಲ್ಲಾ ಘಟಕದ ನಿರ್ಧಾರ

ಕಲಬುರಗಿ: ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ಬೆಳವಣಿಗೆ ಮತ್ತು ಸಂರಕ್ಷಣೆಯ ಉದ್ದೇಶದಿಂದ ಕಲಬುರಗಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಟೋಬರ್‌ ತಿಂಗಳ ಕೊನೆಯ ವಾರದಲ್ಲಿ ಆಯೋಜಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮ್ಮೇಳನವು ಕೇವಲ ಸಾಹಿತಿಗಳ ಸಮಾವೇಶವಾಗಿರದೆ ಜಿಲ್ಲೆಯ ಸಾವಿರಾರು ಕನ್ನಡಿಗರು ಭಾಗವಹಿಸುವ ಸಾಂಸ್ಕೃತಿಕ ಉತ್ಸವವಾಗಬೇಕು. ಕನ್ನಡದ ಉಳಿವಿಗಾಗಿ ನಡೆಯುವ ಈ ಸಮ್ಮೇಳನ ನಮ್ಮ ಸಂಸ್ಕೃತಿಯ ಪ್ರತೀಕವಾಗಲಿದೆ ಎಂದರು.

ನಾಡು-ನುಡಿ, ನೆಲ-ಜಲದ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಯುವಜನರಲ್ಲಿ ದೇಶಪ್ರೇಮ ಹಾಗೂ ಭಾಷಾಭಿಮಾನ ಬೆಳೆಸುವುದರ ಜತೆಗೆ, ಹೊಸ ಪೀಳಿಗೆಯಲ್ಲಿ ಕನ್ನಡದ ಕಹಳೆ ಮೊಳಗಿಸುವ ಪ್ರಯತ್ನ ಸಮ್ಮೇಳನದ ಮೂಲಕ ನಡೆಯಲಿದೆ ಎಂದು ಹೇಳಿದರು.

ಸಮ್ಮೇಳನದ ಅಧ್ಯಕ್ಷರ ಆಯ್ಕೆ, ಸ್ವಾಗತ ಸಮಿತಿ ರಚನೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ, ಮುಂದಿನ ವಾರದಿಂದಲೇ ಕಾರ್ಯ ಚಟುವಟಿಕೆಗಳನ್ನು ಆರಂಭಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ಈಗಾಗಲೇ ಐದು ಜಿಲ್ಲಾ ಸಮ್ಮೇಳನಗಳು, 15 ವಿಶೇಷ ಸಮ್ಮೇಳನಗಳು ಹಾಗೂ ನೂರಾರು ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿದ ಕೀರ್ತಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಲ್ಲುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್‌. ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ ಮಾತನಾಡಿ, ಆಡಂಬರವಿಲ್ಲದೆ ಅರ್ಥಪೂರ್ಣ ಚರ್ಚೆಗಳು ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳ ವಿನಿಮಯಕ್ಕೆ ಆದ್ಯತೆ ನೀಡುವ ಮೂಲಕ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಸಭೆಯಲ್ಲಿ ಶಕುಂತಲಾ ಪಾಟೀಲ ಜಯಶ್ರೀ ಜಮಾದಾರ, ಡಾ. ರೆಹಮಾನ್ ಪಟೇಲ್, ಕಲ್ಯಾಣಕುಮಾರ ಶೀಲವಂತ, ಶಿವಾನಂದ ಸುರವಸೆ, ಶಿವಾನಂದ ಪೂಜಾರಿ, ಧರ್ಮರಾಜ ಜವಳಿ, ಜೆ.ಎಸ್‌. ವಿನೋದಕುಮಾರ, ಸಿದ್ದಲಿಂಗ ಬಾಳಿ, ಗಣೇಶ ಚಿನ್ನಾಕಾರ, ಸೋಮಶೇಖರಯ್ಯ ಹೊಸಮಠ, ಹನುಮಂತರಾವ್ ಪೇಂಚನಪಳ್ಳಿ, ಸೈಯ್ಯದ್ ನಜೀರುದ್ದೀನ್ ಮುಂತಾದವರು ಉಪಸ್ಥಿತರಿದ್ದರು.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button