ಜಿಲ್ಲೆ ಸುದ್ದಿರಾಜ್ಯ

ತರಬೇತಿ ವಿಮಾನಕ್ಕೆ ತಾಂತ್ರಿಕ ದೋಷ: ತೊಗರಿ ಹೊಲದಲ್ಲಿ ತುರ್ತು ಭೂಸ್ಪರ್ಶ

ಇಬ್ಬರು ಸಿಬ್ಬಂದಿ ಸುರಕ್ಷಿತ; ಕಲಬುರಗಿ ವಿಮಾನ ನಿಲ್ದಾಣದ ಸಮೀಪ ಘಟನೆ

ಕಲಬುರಗಿ: ಆಕಾಶದಲ್ಲಿ ಹಾರಾಟ ನಡೆಸುತ್ತಿದ್ದ ತರಬೇತಿ ವಿಮಾನವೊಂದರಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ, ಕಲಬುರಗಿ ವಿಮಾನ ನಿಲ್ದಾಣದ ಸಮೀಪದ ರೈತರ ತೊಗರಿ ಹೊಲದಲ್ಲಿ ವಿಮಾನವನ್ನು ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ.

ವಿಮಾನ ಹಾರಾಟದ ವೇಳೆ ತಾಂತ್ರಿಕ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸಿಬ್ಬಂದಿ ವಿಮಾನದ ನಿಯಂತ್ರಣವನ್ನು ತಮ್ಮ ಕೈಗೆ ಪಡೆದುಕೊಂಡಿದ್ದಾರೆ. ಬಳಿಕ ಯಾವುದೇ ಅಪಾಯವಾಗದಂತೆ ಸೂಕ್ತ ಸ್ಥಳವನ್ನು ಆಯ್ಕೆ ಮಾಡಿಕೊಂಡು ರೈತರ ಜಮೀನಿನಲ್ಲಿ ವಿಮಾನವನ್ನು ಇಳಿಸಿದ್ದಾರೆ. ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರೂ ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.

ಘಟನೆಯು ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದೇ ತುರ್ತು ಭೂಸ್ಪರ್ಶಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ವಿಮಾನದ ತಾಂತ್ರಿಕ ಸ್ಥಿತಿ ಹಾಗೂ ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಸಂಬಂಧಿಸಿದ ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button