ಪ್ರಜಾಪ್ರಭುತ್ವ ಉಳಿವು, ಸಂವಿಧಾನ ರಕ್ಷಣೆ ಕುರಿತು ವಿಚಾರ ಸಂಕಿರಣ

ಜೇವರ್ಗಿ, ಅ.7: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅ.9ರಂದು ಬೆಳಿಗ್ಗೆ 11ಕ್ಕೆ ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ವಿಚಾರಗೋಷ್ಠಿ, ಕಾರ್ಯಾಗಾರ ಹಾಗೂ ‘ಪ್ರಜಾಪ್ರಭುತ್ವದ ಉಳಿವು ಮತ್ತು ಸಂವಿಧಾನದ ರಕ್ಷಣೆ’ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಮಾತಾ ಸಾವಿತ್ರಿಬಾಯಿ ಫುಲೆ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಭಾಗಣ್ಣ ಕಟ್ಟಿ ಕೊಳಕೂರ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಅಧ್ಯಕ್ಷ ಭಾಗಣ್ಣ ಕಟ್ಟಿ ಕೊಳಕೂರ ವಹಿಸಲಿದ್ದಾರೆ. ಕಲಬುರಗಿ ಜಿಲ್ಲೆ ಹಾಗೂ ಜೇವರ್ಗಿ ತಾಲ್ಲೂಕಿನ ಪ್ರಗತಿಪರರು, ವಿಚಾರವಂತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳ ಕುರಿತು ಚರ್ಚೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕಿನ ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಭಾಗಣ್ಣ ಕಟ್ಟಿ ಕೊಳಕೂರ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.



