ಜಿಲ್ಲಾಸುದ್ದಿಗಳು

ಆಗಸ್ಟ್‌ನಲ್ಲಿ ಜಿಲ್ಲಾ ಕೋಲಿ-ಕಬ್ಬಲಿಗ ನೌಕರರ ಸಮಾವೇಶ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನ

ಕಲಬುರಗಿ, ಜು. 28: ಜಿಲ್ಲಾ ಕೋಲಿ-ಕಬ್ಬಲಿಗ ನೌಕರರ ಸಂಘದ ವತಿಯಿಂದ ಆಗಸ್ಟ್ ತಿಂಗಳಲ್ಲಿ ಆಯೋಜಿಸಲಾಗಿರುವ ಜಿಲ್ಲಾ ನೌಕರರ ಸಮಾವೇಶದ ಪೂರ್ವಸಿದ್ಧತೆ ಅಂಗವಾಗಿ ನಗರದ ಸಪ್ತಗಿರಿ ಆರೇಂಜ್ ಹೋಟೆಲ್‌ನಲ್ಲಿ ಭಾನುವಾರ ಆಯ್ದ ಪದಾಧಿಕಾರಿಗಳ ವಿಶೇಷ ಸಭೆ ನಡೆಯಿತು.

ಜಿಲ್ಲಾ ಸಂಘದ ಅಧ್ಯಕ್ಷ ನೀಲಕಂಠ ಜಮಾದಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾವೇಶದ ರೂಪುರೇಷೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಸಿಬಿಎಸ್‌ಇ ಹಾಗೂ ಪಿಯುಸಿ (ಕಲಾ, ವಿಜ್ಞಾನ ಮತ್ತು ವಾಣಿಜ್ಯ) ವಿಭಾಗಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲು ನಿರ್ಧರಿಸಲಾಯಿತು.

ಇದರೊಂದಿಗೆ ಸಂಘದ ನೂತನ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ, ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ನೌಕರರು ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಸಮಾವೇಶದಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರತಿಭಾನ್ವೇಷಣೆಗಾಗಿ ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಹಾಗೂ ಜಾತಿ ಪ್ರಮಾಣಪತ್ರದ ಝೆರಾಕ್ಸ್ ಪ್ರತಿಯನ್ನು ಜುಲೈ 31ರೊಳಗೆ ಜಿಲ್ಲಾ ಸಂಘದ ಅಧ್ಯಕ್ಷ ನೀಲಕಂಠ ಜಮಾದಾರ ಅವರ ಮೊಬೈಲ್ ಸಂಖ್ಯೆ 9901572091ಕ್ಕೆ ಕಳುಹಿಸುವಂತೆ ಸಂಘ ಮನವಿ ಮಾಡಿದೆ.

ಈ ಕುರಿತು ಜಿಲ್ಲಾ ಕೋಲಿ-ಕಬ್ಬಲಿಗ ನೌಕರರ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಜಿ. ಮಹಾಗಾಂವ ಹಾಗೂ ಕಾರ್ಯದರ್ಶಿ ಚಂದ್ರಕಾಂತ ತಳವಾರ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button