ಸಮಾಜ ಸೇವೆಯೇ ವೈದ್ಯ ವೃತ್ತಿಯ ಮೂಲ ಧ್ಯೇಯ: ಡಾ. ರವೀಂದ್ರನಾಥ ಮೇಟಿ

ಕಲಬುರಗಿ: ವೈದ್ಯ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ಸೇವೆಯ ಮಹತ್ತರ ಜವಾಬ್ದಾರಿಯಾಗಿದ್ದು, ಸರ್ಕಾರಿ ವೈದ್ಯರು ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ ಆರೋಗ್ಯ ವ್ಯವಸ್ಥೆಯನ್ನು ಸದೃಢಗೊಳಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ (ಕೆಜಿಎಂಒಎ) ರಾಜ್ಯಾಧ್ಯಕ್ಷ ಹಾಗೂ ಬೆಂಗಳೂರು ಉಪನಿರ್ದೇಶಕರಾದ ಡಾ. ರವೀಂದ್ರನಾಥ ಮೇಟಿ ಹೇಳಿದರು.
ನಗರದ ಸಾಯಿ ಮಂದಿರ ಸಮೀಪದ ವಿ.ಎಲ್. ಪಾಟೀಲ್ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಆಯೋಜಿಸಿದ್ದ 2026–27ನೇ ಸಾಲಿನ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಬುರಗಿ ವಿಭಾಗದ ವಿಭಾಗೀಯ ಉಪನಿರ್ದೇಶಕರು ಹಾಗೂ ಜಿಲ್ಲಾ ಅಧ್ಯಕ್ಷರಾದ ಡಾ. ಶರಣಬಸಪ್ಪ ಗಣಜಲಖೇಡ್ ವಹಿಸಿದ್ದರು. ಸಂಘದ ಸದಸ್ಯರ ಏಕತೆ, ವೈದ್ಯರ ವೃತ್ತಿಪರ ಬೆಳವಣಿಗೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.
ಕಲಬುರಗಿ ವಿಭಾಗೀಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಆಸ್ಪತ್ರೆಯ ಆರ್ಎಂಒ ಡಾ. ನಾಗರಾಜ ಪಾಟೀಲ ವಿಶೇಷ ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕ ಡಾ. ಶಂಕರಪ್ಪ, ಜಿಲ್ಲಾ ಗೌರವಾಧ್ಯಕ್ಷ ಹಾಗೂ ವಿಭಾಗೀಯ ಉಪನಿರ್ದೇಶಕ ಡಾ. ಅಂಬಾರಾಯ ರುದ್ರವಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ರುಕಿಯಾ ಅಸ್ನಾ ರಬಾ ಹಾಗೂ ಹಿರಿಯ ಶಸ್ತ್ರಚಿಕಿತ್ಸಕ ಡಾ. ರಾಜಶೇಖರ ಮಾಲಿ ಭಾಗವಹಿಸಿ ವೈದ್ಯರ ಸೇವೆಯನ್ನು ಶ್ಲಾಘಿಸಿದರು.
ವಿಶೇಷ ಆಹ್ವಾನಿತರಾಗಿ ರಾಜ್ಯ ಉಪಾಧ್ಯಕ್ಷ ಡಾ. ಮೋಹನ್, ವಿಭಾಗೀಯ ಜಂಟಿ ಕಾರ್ಯದರ್ಶಿ ಡಾ. ರುದ್ರಗೌಡ, ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಸತೀಶ್, ಆಂತರಿಕ ಲೆಕ್ಕ ಪರಿಶೋಧಕಿ ಡಾ. ಶೋಭಾ ಟಿ.ಆರ್., ಸಂಘದ ವ್ಯವಸ್ಥಾಪಕ ಕೃಷ್ಣಪ್ಪ, ಶ್ರೀ ಆಸ್ಪತ್ರೆಯ ಡಾ. ಸಚಿನ್ ಮತ್ತು ಡಾ. ಶ್ವೇತ, ವಿ.ಎಲ್. ಪಾಟೀಲ್ ಆಸ್ಪತ್ರೆಯ ಡಾ. ರವೀಂದ್ರ ಪಾಟೀಲ್, ಸಂಜನಾ ಆಸ್ಪತ್ರೆಯ ಡಾ. ಅಂಬರಪ್ಪ ಜಂಪಾ, ಶಾರದಾಂಬೆ ಆಸ್ಪತ್ರೆಯ ಡಾ. ಗಿರೀಶ್ ಸ್ವಾಮಿ ಹಾಗೂ ಡಾ. ದೀಪ ಸ್ವಾಮಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವೈದ್ಯರು, ನಿವೃತ್ತ ವೈದ್ಯರು, ವೈದ್ಯರ ಪ್ರತಿಭಾವಂತ ಮಕ್ಕಳು ಹಾಗೂ ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದ ವೈದ್ಯರನ್ನು ಸನ್ಮಾನಿಸಲಾಯಿತು. ಬಳಿಕ ವೈದ್ಯರು ಮತ್ತು ಅವರ ಕುಟುಂಬ ಸದಸ್ಯರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭದ ಮೆರುಗನ್ನು ಹೆಚ್ಚಿಸಿವೆ.
ಕಾರ್ಯಕ್ರಮದ ಯಶಸ್ಸಿಗೆ ಕಲಬುರಗಿ ಶಾಖೆಯ ಉಪಾಧ್ಯಕ್ಷರಾದ ಡಾ. ವಿನೋದಕುಮಾರ ಎಸ್.ಹೆಚ್., ಡಾ. ಇರ್ಫಾನ್ ಅಲಿ, ಕಾರ್ಯದರ್ಶಿ ಡಾ. ಸಂತೋಷ ಆಲಗೂರ, ಖಜಾಂಚಿ ಡಾ. ದೀಪಕ್ ಕುಮಾರ ರಾಠೋಡ, ಜಂಟಿ ಕಾರ್ಯದರ್ಶಿಗಳಾದ ಡಾ. ಸಂಧ್ಯಾ ಕಾನೇಕರ್ ಹಾಗೂ ಡಾ. ಅಮೃತಾ ಕುಲಕರ್ಣಿ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಶ್ರಮಿಸಿದರು.



