ಕಲಬುರಗಿಜಿಲ್ಲೆ ಸುದ್ದಿ

AIBSS ರಾಜ್ಯ ಯುವ ಘಟಕದ ಉಪಾಧ್ಯಕ್ಷರಾಗಿ ವಿನೋದಕುಮಾರ್ ಜಾಧವ್ ನೇಮಕ

ಕಲಬುರಗಿ: ಆಲ್ ಇಂಡಿಯಾ ಬಂಜಾರ ಸೇವಾ ಸಂಘದ (AIBSS) ರಾಜ್ಯ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಕಲಬುರಗಿಯ ವಿನೋದಕುಮಾರ್ ಬಿನ್ ದೊಂಡಿ ಜಾಧವ್ ಅವರನ್ನು ನೇಮಕ ಮಾಡಲಾಗಿದೆ.

ಸಂಘದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಸುನೀಲ್ ನಾಯ್ಕ್ ಕೆ. ಹರತನಹಳ್ಳಿ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಸಂಘಟನೆಯ ಹಿರಿಯರ ಸಲಹೆಯ ಮೇರೆಗೆ ಈ ನೇಮಕ ಮಾಡಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿನೋದಕುಮಾರ್ ಅವರು ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಂಜಾರ ಸಮಾಜದ ಎಲ್ಲ ವರ್ಗಗಳ ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವುದು, ಸಂಘಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ಸೇರ್ಪಡೆಗೊಳಿಸುವುದು ಹಾಗೂ ಸಮಾಜವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವಂತೆ ವಿನೋದಕುಮಾರ್ ಅವರಿಗೆ ಸೂಚಿಸಲಾಗಿದೆ.

ಅಲ್ಲದೆ, ಯುವಕರನ್ನು ಸಂಘಟಿಸಿ ಬೃಹತ್ ಯುವಪಡೆಯನ್ನು ನಿರ್ಮಿಸುವ ಮೂಲಕ ಸಂಘಟನೆಯ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ವಿಸ್ತರಿಸುವ ಜವಾಬ್ದಾರಿಯನ್ನೂ ಅವರಿಗೆ ವಹಿಸಲಾಗಿದೆ.

ವಿನೋದಕುಮಾರ್ ಜಾಧವ್ ಅವರ ನೇಮಕಕ್ಕೆ ಬಂಜಾರ ಸಮಾಜದ ಮುಖಂಡರು ಹಾಗೂ ಯುವಕರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button