ಕಲಬುರಗಿಜಿಲ್ಲೆ ಸುದ್ದಿ

ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ವಿಜೃಂಭಣೆಯಿಂದ ಆಚರಣೆ

ಕಲಬುರಗಿ: ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ಕರ್ನಾಟಕ ಪ್ರದೇಶ ಬಂಜಾರ ಲಂಬಾಣಿ ಸೇವಾ ಸಂಘದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಗುರುವಾರ ಬಂಜಾರಾ ಭವನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಬಿ.ಬಿ. ನಾಯಕ ಮಾತನಾಡಿ, ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳು, ಬಡವರು ಹಾಗೂ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಮಹಾನ್ ನಾಯಕರು. ಅವರು ಪ್ರತಿಪಾದಿಸಿದ ಸಾಮಾಜಿಕ ನ್ಯಾಯದ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಸಂಘದ ಉಪಾಧ್ಯಕ್ಷ ಲಕ್ಷ್ಮಣ ಚವಾಣ್, ಖಜಾಂಚಿ ಲಾಲಪ್ಪ ರಾಠೋಡ್, ಕೀರು ನಾಯಕ, ಜಗನ್ನಾಥ ಮಹಿಮಾ, ಘಟಕದ ಕಾರ್ಯದರ್ಶಿ ರವೀಂದ್ರ ರಾಠೋಡ್, ಅನಿತಾ ಚವಾಣ್, ಜಗದೇವಿ, ಬಾಬು ಚವಾಣ್, ಆರತಿ ಜಗನ್ನಾಥ ಮದರಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಡಿ. ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಆಶಯಗಳನ್ನು ಸ್ಮರಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button