ಕಲಬುರಗಿರಾಜ್ಯ

‘ಧೀಮಂತ ಧುರೀಣ’ ಅಭಿನಂದನಾ ಗ್ರಂಥ ಬಿಡುಗಡೆ: ಖರ್ಗೆ ಅವರ ಸೇವೆಗೆ ಗಣ್ಯರ ಮೆಚ್ಚುಗೆ

ಕಲಬುರಗಿ: ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಮತ್ತು ರಾಜಕೀಯ ಜೀವನವನ್ನು ಬಿಂಬಿಸುವ ‘ಧೀಮಂತ ಧುರೀಣ’ ಅಭಿನಂದನಾ ಗ್ರಂಥವನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ಮಲ್ಲಿಕಾರ್ಜುನ ಖರ್ಗೆ ಅವರು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುವ ಮೂಲಕ ದೇಶದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹಿಂದುಳಿದವರು, ಶೋಷಿತರು ಹಾಗೂ ದುರ್ಬಲ ವರ್ಗಗಳ ಧ್ವನಿಯಾಗಿ ನಿರಂತರವಾಗಿ ಕೆಲಸ ಮಾಡಿರುವ ಅವರ ರಾಜಕೀಯ ಬದುಕು ಇಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಹೇಳಿದರು.

ಖರ್ಗೆ ಅವರು ಮಾತನಾಡಿ, ತಮ್ಮ ಸಾರ್ವಜನಿಕ ಜೀವನದ ಹಾದಿಯಲ್ಲಿ ಜನರು, ಕಾರ್ಯಕರ್ತರು ಹಾಗೂ ಸಹೋದ್ಯೋಗಿಗಳು ನೀಡಿದ ಬೆಂಬಲವನ್ನು ಸ್ಮರಿಸಿದರು. ಜನರ ಸೇವೆಯೇ ತಮ್ಮ ರಾಜಕೀಯ ಬದುಕಿನ ಪ್ರಮುಖ ಉದ್ದೇಶವಾಗಿದ್ದು, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಆಶಯಗಳಿಗಾಗಿ ನಿರಂತರವಾಗಿ ಶ್ರಮಿಸುವುದಾಗಿ ತಿಳಿಸಿದರು.

ನಟ ಪ್ರಕಾಶ್ ರೈ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತುವ ನಾಯಕತ್ವದ ಅಗತ್ಯವಿದೆ. ಮಲ್ಲಿಕಾರ್ಜುನ ಖರ್ಗೆ ಅವರ ದೀರ್ಘಕಾಲದ ಸಾರ್ವಜನಿಕ ಬದುಕು ಮತ್ತು ಹೋರಾಟದ ಮನೋಭಾವ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಡಾ. ಸೈಯದ್ ಮಹಮ್ಮದ್ ಅಲಿ ಅಲ್ ಹುಸೇನಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಸಚಿವ ಡಾ. ಶರಣಪ್ರಕಾಶ ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಮೇಯರ್ ವರ್ಷಾ ರಾಜೀವ್ ಜಾನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಾಜಿ ಸಚಿವ ರೇವೂ ನಾಯಕ್ ಬೆಳಮಗಿ, ಚಂದ್ರಿಕಾ ಪರಮೇಶ್ವರ, ಶರಣು ಮೋದಿ, ದತ್ತಾತ್ರೇಯ ಇಕ್ಕಳಕಿ, ಬಿ.ಆರ್. ಬುದ್ಧ, ಲಕ್ಷ್ಮೀಕಾಂತ ಹುಬ್ಬಳ್ಳಿ, ಅಮೃತ ಸಜ್ಜನ್ ಸೇರಿದಂತೆ ಹಲವು ಗಣ್ಯರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button