ಆ.5 ರಂದು ಕನಕದಾಸರ ಕುರಿತು ವಿಶೇಷ ಉಪನ್ಯಾಸ
ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಕನಕದಾಸರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಕಲಬುರಗಿ, ಆ. 4: ಕರ್ನಾಟಕ ಸರ್ಕಾರದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ, ಕಾಗಿನೆಲೆ ಹಾಗೂ ಕಲಾನಿಕೇತನ ಟ್ರಸ್ಟ್, ಸಾಗರ ಇವರ ಸಹಯೋಗದಲ್ಲಿ ಕನ್ನಡದ ಸಂತಕವಿ ಕನಕದಾಸರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಗಸ್ಟ್ 5ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಯುವ ಮುಖಂಡ ತಿರುಪತಿ ಹಟ್ಟಿಕಟಗಿ ಉದ್ಘಾಟಿಸಲಿದ್ದು, ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದ ಕಾರ್ಯದರ್ಶಿ ಜಗನ್ನಾಥ ಎಸ್. ನಾಗೂರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಹಿರಿಯ ಪತ್ರಕರ್ತ ಡಾ. ಶಿವರಂಜನ್ ಸತ್ಯಂಪೇಟೆ ಅವರು “ಕನಕದಾಸರ ಸಾಹಿತ್ಯದಲ್ಲಿ ಸಾಮಾಜಿಕ ಮೌಲ್ಯಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಪ್ರಜ್ಞಾ ಸೇವಾ ಸಂಸ್ಥೆಯ ಅಧ್ಯಕ್ಷ ಕಾಶಿನಾಥ ಮರತೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಸಮಾಜಸೇವಕ ಹಣಮಂತ ಅಟ್ಟೂರ ಹಾಗೂ ಕಲಾನಿಕೇತನ ಟ್ರಸ್ಟ್, ಸಾಗರದ ಅಧ್ಯಕ್ಷ ಬಸವರಾಜ ಶಿಣ್ಣೂರ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ಕನ್ನಡ ಸಾಹಿತ್ಯ, ಕನಕದಾಸರ ಚಿಂತನೆಗಳು ಹಾಗೂ ಸಾಮಾಜಿಕ ಮೌಲ್ಯಗಳ ಬಗ್ಗೆ ಆಸಕ್ತಿ ಹೊಂದಿರುವ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.



